ಮಂಗಳೂರು: ನೀಟ್ ಪರೀಕ್ಷಾ ಅಕ್ರಮದ ತನಿಖೆಗಾಗಿ ಫಾಸ್ಟ್ಟ್ರ್ಯಾಕ್ ಕೋರ್ಟ್ ಸ್ಥಾಪನೆ ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಭರವಸೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಯುವಜನರ ಭವಿಷ್ಯದ ಜೊತೆ ಆಟವಾಡುವವರಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಿಬಿಐ ತನಿಖೆಗೆ ಆದೇಶಿಸಿ ಅಕ್ರಮ ಎಸಗಿದವರನ್ನು ಪತ್ತೆ ಹಚ್ಚಲಾಗಿದೆ. ಪ್ರಧಾನಿ ಕಚೇರಿಯ ನೇರ ಮೇಲ್ವಿಚಾರಣೆಯಲ್ಲಿ ಅತ್ಯಂತ ಪಾರದರ್ಶಕವಾಗಿ ಮರುಪರೀಕ್ಷೆ ನಡೆಸಿ ಫಲಿತಾಂಶವನ್ನೂ ಪ್ರಕಟಿಸಲಾಗಿದೆ. ಇದು ದೇಶದ ಶೈಕ್ಷಣಿಕ ಹಿತಾಸಕ್ತಿಯ ಬಗ್ಗೆ ಪ್ರಧಾನಿಗಳಿಗಿರುವ ಕಾಳಜಿಯನ್ನು ತೋರಿಸುತ್ತದೆ. ಆದರೆ, ಈ ಸೂಕ್ಷ್ಮ ವಿಚಾರದಲ್ಲೂ ವಿರೋಧ ಪಕ್ಷಗಳು ಹಾಗೂ ಎಡಪಂಥೀಯರು ರಾಜಕೀಯ ಲಾಭ ಹುಡುಕ ಹೊರಟಿರುವುದು ಖಂಡನೀಯ ಎಂದು ಅವರು ಹೇಳಿದರು.
ಮಾಧ್ಯಮ ಪ್ರತಿನಿಧಿಗಳ ಮೇಲೆ ದೌರ್ಜನ್ಯ, ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ದೇಶವಿರೋಧಿ ಚಟುವಟಿಕೆಗಳ ಹಿಂದಿರುವ ವ್ಯವಸ್ಥಿತ ಪಿತೂರಿಯನ್ನು ವಿದ್ಯಾರ್ಥಿ ಮುಖಂಡರು ಈಗ ಅರ್ಥೈಸಿಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಯುವಸಮುದಾಯದ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಣಾಯಕ ಕ್ರಮಗಳನ್ನು ಇಡೀ ದೇಶವೇ ಮುಕ್ತಕಂಠದಿಂದ ಸ್ವಾಗತಿಸುತ್ತಿದ್ದು, ಇದು ಮೋದಿಯವರ ಮೇಲಿರುವ ಅಪಾರ ವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










