ಮಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎನ್.ಯೋಗೀಶ್ ಭಟ್ ಆರೋಪಿಸಿದ್ದಾರೆ. ಅವರು ಇಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಪ್ರಸ್ತಾಪಿಸಿದರು.
ಜೆ.ಆರ್.ಲೋಬೊ ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಆಗಿದ್ದ ಸಂದರ್ಭದಲ್ಲಿ ನಿಯಮಗಳ ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಬೆಂಗಳೂರಿನ ಎನ್.ಆರ್.ರೈ ಎಂಬುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಈ ದೂರು ಈಗಲೂ ವಿಚಾರಣೆಯ ಹಂತದಲ್ಲಿದ್ದು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಲೋಬೊ ಈ ಬಗ್ಗೆ ಯಾವುದೇ ಮಾಹಿತಿಯನ್ನು ಆಯೋಗಕ್ಕೆ ನೀಡಿಲ್ಲ ಈ ಕುರಿತು ಸ್ಥಳೀಯ ಚುನಾವಣಾಧಿಕಾರಿಯವರಿಗೆ ದೂರು ನೀಡಲಾದರು ಅವರು ಈ ಕುರಿತು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲದೆ ಇರುವುದರಿಂದ ಆದಷ್ಟು ಬೇಗ ಕಾನೂನು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದ ಮೊರೆ ಹೋಗಲಾಗುವುದೆಂದು ತಿಳಿಸಿದರು.
Click this button or press Ctrl+G to toggle between Kannada and English