ಮಂಗಳೂರು : ಕಾಟಿಪಳ್ಳದಲ್ಲಿರುವ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಮ್ಯಾನೇಜರ್ ಹುದ್ದೆಯಲ್ಲಿದ್ದ ಅಂಜನಾ ಎಂಬಾಕೆಯ ಮೃತ ದೇಹವು ಬುಧವಾರ ತಡರಾತ್ರಿ ಬಿಜೈ-ಕಾಪಿಕಾಡ್ ಬಳಿಯ ಮನೆಯೊಂದರಲ್ಲಿ ಪತ್ತೆಯಾಗಿದೆ.
ಮುಲತಹ ಕೇರಳದವರಾದ ಅಂಜನಾ ಕಾಟಿಪಳ್ಳದಲ್ಲಿರುವ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಮ್ಯಾನೇಜರ್ ಹುದ್ದೆಯಲ್ಲಿದ್ದು, ಗಾಂಧಿನಗರದಲ್ಲಿರುವ ಬ್ಯಾಂಕ್ ಕ್ವಾರ್ಟರ್ಸ್ ನಲ್ಲಿ ವಾಸ್ತವ್ಯ ಹೂಡಿದ್ದರು. ಅಂಜನಾರ ತಾಯಿ ಪ್ರಸನ್ನ ಎರಡು ದಿನಗಳ ಹಿಂದೆ ಈಕೆ ನಾಪತ್ತೆಯಾದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮೃತ ಅಂಜನಾ ಕಾಪಿಕಾಡ್ ನಲ್ಲಿರುವ ಒಂದು ಮನೆಗೆ ಆಗಾಗ ಹೋಗುತ್ತಿದ್ದು ಇದೇ ಮನೆಯಲ್ಲಿ ಬುಧವಾರ ರಾತ್ರಿ ಆಕೆಯ ಶವವನ್ನು ಕಂಡ ನೆರೆಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮನೆಯಲ್ಲಿದ್ದ ವ್ಯಕ್ತಿ ಪರಾರಿಯಾಗಿದ್ದು ಕೊಲೆಯ ಶಂಕೆ ವ್ಯಕ್ತವಾಗಿದೆ. ಮೃತಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English