ಮಂಗಳೂರು : ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಹಂಪನಕಟ್ಟೆಯಲ್ಲಿ ಮಂಗಳವಾರ ಬೆಳಗಿನ ಜಾವ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ‘ಯುರೋಪ್’ ಹೆಸರಿನ ಶೂ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ತೀವ್ರತೆಗೆ ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿದ್ದ ಮತ್ತೂ ಎರಡು ಅಂಗಡಿಗಳಿಗೆ ಹರಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿ ಅಪಾರ ನಷ್ಟ ಸಂಭವಿಸಿದೆ.
ಅವಘಡದ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ಹತೋಟಿಗೆ ತರಲು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಾರ್ಟ್ ಸರ್ಕ್ಯೂಟ್ ಉಂಟಾಗಿ ಈ ಅನಾಹುತ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಯಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು










