ಮಂಗಳೂರು : ಜೆಡಿಎಸ್ ನಿಂದ ಜಿಲ್ಲೆಯಲ್ಲಿ ಸಮರ್ಪಕ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದ್ದು ಪ್ರತಿಯೊಬ್ಬ ಅಭ್ಯರ್ಥಿಯೂ ತಮ್ಮ ತಮ್ಮ ಕ್ಷೇತ್ರದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಬಿ. ಸದಾಶಿವ ತಿಳಿಸಿದರು.
ಬುಧವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಘೋಷ್ಟಿಯನ್ನುದ್ದೇಶಿಸಿ ಮಾತನಾಡುತ್ತಾ, ಜಿಲ್ಲಾ ಜೆಡಿಎಸ್ ನಲ್ಲಿದ್ದ ವಿವಿಧ ಗೊಂದಲಗಳು ಶಮನಗೊಂಡಿದ್ದು, ಜಿಲ್ಲೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿ ಹೊಂದಿರುವುದಾಗಿ ಅವರು ತಿಳಿಸಿದರು. ಪಕ್ಷ ಅಧಿಕಾರಕ್ಕೆ ಬಂದರೆ ಮಂಗಳೂರು ನಗರದ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿ, ಮಹಿಳೆಯರ ರಕ್ಷಣೆ ಮೊದಲಾದ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಅವರು ತಿಳಿಸಿದರು.ಈ ಸಂದರ್ಭ ಕಾರ್ಪೊರೇಟರ್ ಅಬ್ದುಲ್ ಅಜೀಜ್ ಕುದ್ರೋಳಿಯವರನ್ನು ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.
ಪತ್ರಿಕಾಗೋಷ್ಟಿಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಎಸ್. ಚಂಗಪ್ಪ, ಉತ್ತರ ಕ್ಷೇತ್ರದ ಅಭ್ಯರ್ಥಿ ಗುಲಾಮ ಮಹಮ್ಮದ್, ಕಾರ್ಯಾಧ್ಯಕ್ಷ ಮಹಮ್ಮದ್ ಕುನ್ನಿ, ಮುಖಂಡರಾದ ಕೃಷ್ಣಪ್ಪ ಪೂಜಾರಿ, ಸುಶೀಲ್ ನೊರೊನ್ಹಾ, ಅಜೀಜ್ ಮಲಾರ್, ರತ್ನಾಕರ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English