ಬಂಟ್ವಾಳ : ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್ ಪಿಂಟೊ (48) ಎಂಬವರು ಮನೆಯ ಸಮೀಪದ ತೋಡಿನಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಇವರ ಮೃತದೇಹವು ಸುದೀರ್ಘ ಶೋಧ ಕಾರ್ಯಾಚರಣೆಯ ನಂತರ ಸೋಮವಾರ ಬೆಳಿಗ್ಗೆ ಅರಳ ಗ್ರಾಮದ ಪಂಬದಗದ್ದೆ ಎಂಬಲ್ಲಿ ಪತ್ತೆಯಾಗಿದೆ.
ಆಗಸ್ಟ್ 1 ರಂದು ಶನಿವಾರ ರಾತ್ರಿ ಜೀವನ್ ಅವರು ತಮ್ಮ ಮಾವನ ಮನೆಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದಾಗ, ಹರಿಯುವ ತೋಡಿನ ಕಾಲುಸಂಕವನ್ನು ದಾಟುವಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿನ ಪ್ರವಾಹಕ್ಕೆ ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರದೇಶದಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಹಾಗೂ ತೋಡಿನಲ್ಲಿ ಹರಿಯುತ್ತಿದ್ದ ರಭಸದ ನೀರಿನ ನಡುವೆಯೂ ಅಗ್ನಿಶಾಮಕ ದಳ, ಎನ್ಡಿಆರ್ಎಫ್ (NDRF) ತಂಡ ಹಾಗೂ ಸ್ಥಳೀಯ ಗ್ರಾಮಸ್ಥರು ಸತತ ಎರಡು ದಿನಗಳ ಕಾಲ ಜಂಟಿಯಾಗಿ ಶೋಧ ಕಾರ್ಯ ನಡೆಸಿದ್ದರು. ತೀವ್ರ ಹುಡುಕಾಟದ ಫಲವಾಗಿ ಸೋಮವಾರ ಬೆಳಿಗ್ಗೆ ಅವರ ಮೃತದೇಹ ದೊರೆತಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









