- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಾಜ್ಯ ವಿಧಾನಸಭಾ ಚುನಾವಣೆ ಮೇ 2 ರಂದು ಜಿಲ್ಲೆಗೆ ಭೇಟಿ ನೀಡಲಿರುವ ನರೇಂದ್ರ ಮೋದಿ

Nalin Kumar Kateel [1]ಮಂಗಳೂರು : ಮೇ 2 ರಂದು ಬಿಜೆಪಿಯ ಹಿರಿಯ ನಾಯಕ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮಂಗಳೂರಿಗೆ ಭೇಟಿ ನೀಡಲಿರುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಈ ವಿಷಯವನ್ನು ತಿಳಿಸುತ್ತಾ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ, ಚುನಾವಣಾ ಪ್ರಚಾರದ  ಹಿನ್ನಲೆಯಲ್ಲಿ  ಆಗಮಿಸಲಿರುವುದಾಗಿ ತಿಳಿಸಿದರು.

ತಾಕತ್ತಿದ್ದರೆ ಮೋದಿಯನ್ನು ರಾಜ್ಯಕ್ಕೆ ಕರೆತನ್ನಿ ಎಂದು ಕೆಲವರು ಈ ಹಿಂದೆ ಸವಾಲನ್ನು ಹಾಕಿದ್ದು ಇದಕ್ಕೆ ಉತ್ತರವಾಗಿ ಅವರು ಮೇ 2 ರಂದು ಮಂಗಳೂರಿಗೆ ಆಗಮಿಸುವಂತೆ ಮಾಡಿದ್ದೇವೆ ಎಂದರು. ಮೇ 2 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೇಂದ್ರ ಮೈದಾನದಲ್ಲಿ  ನಡೆಯಲಿರುವ ಸಾರ್ವಜನಿಕ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರತಾಪ ಸಿಂಹ ನಾಯಕ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ನಿತಿನ್ ಕುಮಾರ್, ಶ್ರೀಕರ ಪ್ರಭು ಮೊದಲಾದವರು ಉಪಸ್ಥಿತರಿದ್ದರು.