ರಾಜ್ಯದಲ್ಲಿ ಸುಭದ್ರ ಸರ್ಕಾರವನ್ನು ನೀಡಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ : ಉಮ್ಮನ್ ಚಾಂಡಿ

12:12 PM, Friday, May 3rd, 2013
Share
1 Star2 Stars3 Stars4 Stars5 Stars
(No Ratings Yet)
Loading...

Oommen Chandyಮಂಗಳೂರು : ಬಿಜೆಪಿ ಪಕ್ಷದ ಭ್ರಷ್ಟಾಚಾರ, ಒಳಜಗಳದಿಂದ ಬೇಸತ್ತ ಕರ್ನಾಟಕದ ಜನತೆ ಉತ್ತಮ ಆಡಳಿತದ ನಿರೀಕ್ಷೆಯಲ್ಲಿದ್ದು, ಇಂತಹ ಆಡಳಿತವನ್ನು ನೀಡಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯವಿದೆ ಆದ್ದರಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್  ನಿಶ್ಚಿತ ಗೆಲುವು ಸಾಧಿಸುವುದು ಎಂದು ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದರು.

ಅವರು ಗುರುವಾರ ದಕ್ಷಿಣ ವಿಧಾನಸಭಾ ಚುನಾವಣಾ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಘೋಷ್ಟಿಯಲ್ಲಿ ಮಾತನಾಡುತ್ತಾ ಜಾತ್ಯಾತೀತ ರಾಷ್ಟ್ರ ನಿರ್ಮಾಣ ಕಾಂಗ್ರೆಸ್ ನ ಧ್ಯೇಯವಾಗಿದ್ದು ಇದಕ್ಕೆ ವ್ಯತಿರಿಕ್ತವಾದ ಅನುಭವವನ್ನು ಕರ್ನಾಟಕದ ಜನತೆ ಪ್ರಸ್ತುತ ಸರ್ಕಾರದಿಂದ ಎದುರಿಸಿದ್ದಾರೆ.  ರಾಜ್ಯದಲ್ಲಿನ ಜನತೆ  ಸುಭದ್ರ ಸರ್ಕಾರದ ನಿರೀಕ್ಷೆಯಲ್ಲಿದ್ದು ಇದು ಕಾಂಗ್ರೆಸ್ ಆಡಳಿತದಿಂದ ಮಾತ್ರ ಸಾಧ್ಯ ಎಂದರು. ಕೇಂದ್ರದಲ್ಲಿ ಯುಪಿಎ ಸರ್ಕಾರ ಅಭಿವೃದ್ಧಿ ಕಾರ್ಯಗಳ ಮೂಲಕ ಯಶಸ್ಸಿನೊಂದಿಗೆ ಮುನ್ನಡೆಯುತ್ತಿದ್ದು, ಜನತೆ ಮುಂದಿನ ದಿನಗಳಲ್ಲೂ ಕಾಂಗ್ರೆಸ್ ನ್ನು ಬೆಂಬಲಿಸಬೇಕು ಎಂದು ಅವರು ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English