ಮಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಉಡುಪಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನವನ್ನು ಪಡೆದಿದೆ. ಕೆನರಾ ಕಾಲೇಜಿನ ಅಕ್ಷಯ ಕಾಮತ್ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದರೆ, ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಯಾಗಿರುವ ಸೂರಜ್ ಹೆಗ್ಡೆ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನವನ್ನು ಪಡೆದಿದ್ದಾನೆ.
ಮಂಗಳೂರಿನ ಕೆನರಾ ಪಿ.ಯು. ಕಾಲೇಜಿನ ವಿದ್ಯಾರ್ಥಿಯಾಗಿರುವ ಅಕ್ಷಯ್ ಕಾಮತ್ ಈ ಬಾರಿಯ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ (ಪಿಸಿಎಂಇ) 594 ಅಂಕ ಗಳಿಸಿದ್ದಾರೆ. ದಿನದಲ್ಲಿ ೫ ಗಂಟೆಗಳ ನಿರಂತರ ಅಭ್ಯಾಸ, ಮತ್ತು ಮಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಕ್ಸ್‌ಪರ್ಟ್ ಕೋಚಿಂಗ್ ಸೆಂಟರ್‌ನ ಮಾರ್ಗದರ್ಶನ, ಉಪನ್ಯಾಸಕರು ಹಾಗು ಸ್ನೇಹಿತರ ಬೆಂಬಲದಿಂದಾಗಿ ತಾನು ಈ ಸಾಧನೆ ಮಾಡಲು ಸಾಧ್ಯವಾಗಿದ್ದು, ಮುಂದೆ ಮಂಗಳೂರಿನ ಎನ್‌ಐಟಿಕೆಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ಶಿಕ್ಷಣ ಪಡೆಯುವ ಉದ್ದೇಶವನ್ನು ಹೊಂದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ೬೦೦ ಅಂಕಕ್ಕೆ ೫೯೩ ಅಂಕಗಳನ್ನು ಪಡೆದಿರುವ ಸೂರಜ್ ಹೆಗ್ಡೆ ಪ್ರತಿಷ್ಟಿತ ಆಳ್ವಾಸ್ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡುವ ದತ್ತು ಸ್ವೀಕಾರ ಯೋಜನೆಯಡಿಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಯಾಗಿದ್ದಾರೆ. ಸಿಎ ಆಗುವ ಹಂಬಲದಲ್ಲಿರುವ ಸೂರಜ್ ಈಗಾಗಲೇ ಸಾಕಷ್ಟು ತಯಾರಿ ನಡೆಸಿದ್ದು, ಸಂಜೆ ಕಾಲೇಜಿನ ಮೂಲಕ ಬಿಕಾಂ ಪದವಿಯನ್ನು ಪಡೆದು ಚಾರ್ಟಡ್ ಅಕೌಂಟೆಂಟ್ ಆಗುವ ಉದ್ದೇಶವನ್ನು ಹೊಂದಿದ್ದಾರೆ.
Click this button or press Ctrl+G to toggle between Kannada and English