ಸುರತ್ಕಲ್ : ಮಧ್ಯ ಕೊಡಿಪಾಡಿಯಲ್ಲಿರುವ ಶ್ರೀ ಕೊರ್ದಬ್ಬು ದೈವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ನಗದು ಕಳವು ಮಾಡಿದ್ದ ಪ್ರಕರಣದ ಆರೋಪಿಯನ್ನು ಸುರತ್ಕಲ್ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಉಡುಪಿ ತಾಲೂಕಿನ ಕುಕ್ಕಿಹಳ್ಳಿ ಬೆಲ್ಲಪ್ಪಳ್ಳಿ ನಿವಾಸಿ ಸುಖೇಶ್ ನಾಯ್ಕ್ (40) ಬಂಧಿತ ಆರೋಪಿಯಾಗಿದ್ದು, ಸೋಮವಾರ ಸುರತ್ಕಲ್ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ಈತನನ್ನು ವಶಕ್ಕೆ ಪಡೆಯಲಾಗಿದೆ.
ಆಗಸ್ಟ್ 5 ರಂದು ಬೆಳಗಿನ ಜಾವ ದೈವಸ್ಥಾನದ ಬಾಗಿಲು-ಕಿಟಕಿಗಳನ್ನು ಮುರಿದು ಒಳನುಗ್ಗಿದ್ದ ಕಳ್ಳ, ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 15,000 ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದನು. ಈ ಬಗ್ಗೆ ದಾಖಲಾದ ದೂರಿನಂತೆ ತನಿಖೆ ಕೈಗೆತ್ತಿಕೊಂಡ ವಿಶೇಷ ಪೊಲೀಸ್ ಪಡೆ ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಕಳವು ಕೃತ್ಯ ಒಪ್ಪಿಕೊಂಡಿದ್ದಾನೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಂಧಿತ ಸುಖೇಶ್ ನಾಯ್ಕ್ ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಕಳವು ಎಸಗಿರುವ ಹಳೆಯ ಅಪರಾಧಿಯಾಗಿದ್ದು, ಈತನ ವಿರುದ್ಧ ಈಗಾಗಲೇ 18ಕ್ಕೂ ಹೆಚ್ಚು ಕಳವು ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಶಿಕ್ಷೆಯನ್ನೂ ಅನುಭವಿಸಿರುವ ಈತನ ವಿರುದ್ಧ ನ್ಯಾಯಾಲಯದ ಹಲವು ಬಂಧನ ವಾರಂಟ್ಗಳು ಬಾಕಿಯಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









