ಮಂಗಳೂರು : ಬಿಜೆಪಿಯ ಆಂತರಿಕ ಕಚ್ಚಾಟ, ದುರಾಡಳಿತದಿಂದ ಬೇಸತ್ತ ಜನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆ ತಕ್ಕ ಪಾಠ ಕಲಿಸಿದ್ದು, ಜನರು ಚುನಾವಣೆಯ ಮೂಲಕ ತಮ್ಮ ನಿರ್ಧಾರವನ್ನು ಮುಂದಿಟ್ಟಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗು ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ಹೇಳಿದರು. ಅವರು ಬುಧವಾರ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಹಿನ್ನಲೆಯಲ್ಲಿ ಏರ್ಪಡಿಸಲಾದ ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಮಾತನಾಡಿದರು.
ರಾಜಕೀಯ ಪಕ್ಷಗಳು ತಮಗೆ ಸಿಕ್ಕಿರುವ ಅಧಿಕಾರವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ, ದುರುಪಯೋಗಪಡಿಸಿಕೊಂಡಲ್ಲಿ ಜನರು ಯಾವ ರೀತಿ ಬುದ್ದಿ ಕಲಿಸುತ್ತಾರೆ ಎಂಬುದನ್ನು ರಾಜ್ಯದ ಜನತೆ ಪ್ರಸ್ತುತ ಚುನಾವಣೆಯಲ್ಲಿ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ ಅವರು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯ ರಾಜ್ಯ ಭೇಟಿ ರಾಜ್ಯದ ಜನತೆ ಮೇಲೆ ಯಾವುದೇ ಪ್ರಭಾವವನ್ನು ಬೀರಿಲ್ಲ ಎಂದರು. ಇದೇ ರೀತಿ ಮುಂದೆ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಪಕ್ಷ ಯಾವುದೇ ರೀತಿಯ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಲ್ಲಿ ಜನತೆ ಐದು ವರ್ಷಗಳ ಬಳಿಕ ತಕ್ಕ ಪಾಠ ಕಲಿಸುತ್ತಾರೆ ಎಂಬುದನ್ನು ನೆನಪಿನಲ್ಲಿಡಿ ಎಂದು ಅವರು ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಿದರು. ಜೊತೆಗೆ ಈ ಸಂದರ್ಭ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮತದಾರರಿಗೆ ಕೃತಜ್ಗ್ಯತೆ ಸಲ್ಲಿಸಿದರು.
ಇಬ್ರಾಹಿಂ ಕೋಡಿಜಾಲ್, ಐವಾನ್ ಡಿಸೋಜ, ಹರಿಕೃಷ್ಣ ಬಂಟ್ವಾಳ್, ಮಾಜಿ ಮೇಯರ್ ಅಶ್ರಫ್, ಕಳ್ಳಿಗೆ ತಾರನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English