ಮಂಗಳೂರು : ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸಿಹಿತಿಂಡಿ ವಿತರಿಸಿ, ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಿಸಿದರು.
ಬಿಜೆಪಿ ಯ ಆಡಳಿತದಿಂದ ಬೇಸತ್ತ ಜನ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಗೆಲ್ಲಿಸುವ ಮೂಲಕ ಮತ್ತೊಮ್ಮೆ ರಾಜ್ಯ ರಾಜಕೀಯದಲ್ಲಿ ಅಭಿವೃದ್ದಿಯ ಶಕೆ ಆರಂಭವಾಗುವಂತೆ ಮಾಡಿದ್ದಾರೆ ಎಂದು ಅಶ್ರಫ್ ಹೇಳಿದರು.
ಕೆಪಿಸಿಸಿ ಕಾರ್ಯದರ್ಶಿ ಎಂ.ಎ.ಗಪೂರ್ ಮಾತನಾಡಿ, ಹಿಂದುಳಿದ ವರ್ಗದ ನಾಯಕ, ಆರ್ಥಿಕ ತಜ್ನ್ಯ ಸಿದ್ದರಾಮಯ್ಯ ರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಕ್ಕೆ ಶಾಸಕರುಗಳಿಗೆ ಕೃತಜ್ಗ್ನ್ಯತೆ ಸಲ್ಲಿಸಿದರು.
ಡಿಸಿಸಿ ಹಂಗಾಮಿ ಅಧ್ಯಕ್ಷ ಇಬ್ರಾಸಿಂ ಕೋಡಿಜಾಲ್, ನಾಯಕರಾದ ಕಳ್ಳಿಗೆ ತಾರನಾಥ ಶೆಟ್ಟಿ, ಶಶಿಧರ ಹೆಗ್ಡೆ, ನವೀನ್ ಡಿ’ಸೋಜಾ, ಅಶೋಕ್ ಡಿ.ಕೆ., ಪ್ರವೀಣ್ ಚಂದ್ರ ಆಳ್ವ ಮುಂತಾದವರು ಈ ಸಂದರ್ಭ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English