ಮಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಸಿದ್ದರಾಮಯ್ಯನವರು ಉತ್ತಮ ಆಡಳಿತವನ್ನು ನೀಡಲಿದ್ದು, ಕರ್ನಾಟಕ ರಾಜ್ಯವನ್ನು ಪ್ರಗತಿ ಪಥದತ್ತ ಕೊಂಡೊಯ್ಯಲಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಹೇಳಿದರು. ಅವರು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಏರ್ಪಡಿಸಲಾದ ಪತ್ರಿಕಾಘೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಪ್ರಾರಂಭದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಇತ್ತೀಚಿಗೆ ನಡೆದ ವಿಧಾನಸಭಾ ಚುನವಣೆಗಳಲ್ಲಿ ಭ್ರಷ್ಟಾಚಾರದಿಂದ ಕೂಡಿದ್ದ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿದ ಮತದಾರ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತವನ್ನು ನೀಡುವ ಮೂಲಕ ಅಧಿಕಾರಕ್ಕೆ ತಂದಿದ್ದಾನೆ. ಕಾಂಗ್ರೆಸ್ ಪಕ್ಷವು ಜಾತ್ಯಾತೀತ ನೆಲೆಯಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ನೀಡುವುದಲ್ಲದೆ ತನ್ನ ಜನೋಪಯೋಗಿ ಕಾರ್ಯಗಳ ಮೂಲಕ ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಜಯಗಳಿಸುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೊದಲ ದಿನವೆ ಪ್ರಣಾಳಿಕೆಯಲ್ಲಿನ ಜನಪರ ಕಾರ್ಯುಕ್ರಮಗಳನ್ನು ಜಾರಿಗೆ ತಂದಿದ್ದು, ಇವರ ಆಡಳಿತಾವಧಿಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೆ ಪ್ರಗತಿ ರಾಜ್ಯವಾಗಿ ಮೂಡಿ ಬರಲಿದೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಐವನ್ ಡಿಸೋಜ, ಯು.ಕೆ.ಮೋನು, ಮಾಜಿ ಮೇಯರ್ ಅಶ್ರಫ್, ಕೆ.ಎಂ.ಮಸೂದ್, ಕೃಪಾ ಅಮರ್ ಆಳ್ವ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ನಾಗೇಂದ್ರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English