ಕಾಸರಗೋಡು : ಟಾಟಾ ಸುಮೋದ ಮೇಲ್ಬಾಗದಲ್ಲಿ ವಿಶೇಷ ರಂದ್ರ ನಿರ್ಮಿಸಿ ಆ ಮೂಲಕ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 52 ಕೆ.ಜಿ ಗಾಂಜಾ ಸಹಿತ ಇಬ್ಬರನ್ನು ನಗರ ಠಾಣಾ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಸುನಿಲ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ಕೋಟಯಂ ನಿವಾಸಿ ಕೆ.ಎ. ನವಾಝ್ (32), ನೀಲೇಶ್ವರ ಕುನ್ನುಂಗೈಯ ಸಿ.ಎಚ್.ಸಲೀಂ(32) ಬಂಧಿತ ಆರೋಪಿಗಳಾಗಿದ್ದಾರೆ. ಕಾಸರಗೋಡು ಡಿವೈಎಸ್ಪಿ ಮೋಹನ್ ಚಂದ್ರನ್ ನಾಯರ್ ಗೆ ಲಭಿಸಿದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ರಾಷ್ಟ್ರೀಯ ಹೆದ್ದಾರಿ ಬೇವಿಂಜೆ ಬಳಿ ಆರೋಪಿಗಳನ್ನು ಸೆರೆ ಹಿಡಿದು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಗಾಂಜಾ ಸಾಗಾಟ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ.
Click this button or press Ctrl+G to toggle between Kannada and English