ಮೇ 18.ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರಧಾನ

5:40 PM, Wednesday, May 15th, 2013
Share
1 Star2 Stars3 Stars4 Stars5 Stars
(No Ratings Yet)
Loading...

Beary Academy Awardsಮಂಗಳೂರು : ಬ್ಯಾರಿ ಭಾಷೆ, ಕಲೆ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ವತಿಯಿಂದ ನೀಡಲಾಗುವ ಬ್ಯಾರಿ ಸಾಹಿತ್ಯ ಅಕಾಡಮಿ ಪ್ರಶಸ್ತಿ  ಪ್ರಧಾನ ಸಮಾರಂಭವು ಮೇ 18 ರಂದು ನಗರದ ಪುರಭವನದಲ್ಲಿ ನಡೆಯಲಿರುವುದಾಗಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅಕಾಡಮಿ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದರು.

2012 ನೇ ಸಾಲಿನ ಗೌರವ ಪ್ರಶಸ್ತಿಗೆ ಬ್ಯಾರಿ ಭಾಷೆ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅಲ್ಜಾಜ್ ವಿ.ಎ. ಇಸ್ಮಾಯಿಲ್ ಮದನಿ, ಮುಹಮ್ಮದ್ ಬಡ್ಡೂರು ಹಾಗೂ ಡಾ.ಬಿ.ಕೆ ಯೂಸುಫ್ ಮತ್ತು 2013 ನೇ ಸಾಲಿನ ಗೌರವ ಪ್ರಶಸ್ತಿಗೆ ಬ್ಯಾರಿ ಭಾಷೆ, ಕಲೆ, ಸಾಹಿತ್ಯ ಹಾಗು ಸಂಘಟನಾ ಕ್ಷೇತ್ರದಲ್ಲಿ ಅಬ್ದುಲ್ ರಝಾಕ್ ಹಾಜಿ ಹರೇಕಳ, ಕರಂಬಾರ್ ಮುಹಮ್ಮದ್, ಬಶೀರ್ ಬೈಕಂಪಾಡಿ ಆಯ್ಕೆಯಾಗಿದ್ದಾರೆ. 2012 ಮತ್ತು 13ನೇ ಸಾಲಿನ ಗೌರವ ಪುರಸ್ಕಾರಕ್ಕೆ ಅಬ್ದುಲ್ ಖಾದರ್ ಹಾಜಿ ಗೋಳ್ತಮಜಲು, ಡಾ.ಕಾಪು ಮುಹಮ್ಮದ್, ಹಾಜಿ ಬಿ.ಎಂ.ಮುಮ್ತಾಝ್ ಅಲಿ, ಚಾರ್ಮಾಡಿ ಹಸನಬ್ಬ ಹಾಗು ಝಕರಿಯಾ ವೇಣೂರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು 10 ಸಾವಿರ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರ ವನ್ನು ಒಳಗೊಂಡಿದ್ದು, ಮೇ18 ರಂದು ನಡೆಯಲಿರುವ ಸಮಾರಂಭವನ್ನು ಡಾ.ಮೋಹನ್ ಆಳ್ವ ಉದ್ಘಾಟಿಸಲಿದ್ದು, ಸಾಹಿತಿ ಅಮೃತ ಸೋಮೇಶ್ವರ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರಿಜಿಸ್ಟ್ರಾರ್ ಉಮರಬ್ಬ, ಎ.ಕೆ. ಜಮಾಲುದ್ದೀನ್, ಮುಹಮ್ಮದ್ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English