ಕುಂದಾಪುರ : ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪುನರಾರಂಭ

4:12 PM, Thursday, May 16th, 2013
Share
1 Star2 Stars3 Stars4 Stars5 Stars
(No Ratings Yet)
Loading...

Kundapurಕುಂದಾಪುರ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡ ಕಂಪನಿಯು ಆರ್ಥಿಕ ಮುಗ್ಗಟ್ಟನಿಂದಾಗಿ ಕಾಮಗಾರಿಯನ್ನು ಅರ್ಧದಲ್ಲೇ ನಿಲ್ಲಿಸಿತ್ತು. ಆದರೆ  ಪ್ರಸ್ತುತ ಗುತ್ತಿಗೆ ವಹಿಸಿಕೊಂಡ ಕಂಪನಿಯ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದು ಅರ್ಧದಲ್ಲೇ ನಿಂತ ಹೆದ್ದಾರಿ ಕಾಮಗಾರಿಯನ್ನು ತಕ್ಷಣ ಪೂರೈಸಿಕೊಡುವ ಭರವಸೆ ನೀಡಿದ್ದಾರೆ ಎಂದು ಸಂಸದ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ಅಲ್ಲದೆ ಈ  ಪ್ರದೇಶದಲ್ಲಿ ಎಂಬ್ಯಾಂಕ್ ಮೆಂಟ್ ನಿರ್ಮಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಹಲವಾರು ಸಂಘಟನೆಗಳು ಹೋರಾಟ ನಡೆಸಿ ಎಂಬ್ಯಾಂಕ್ ಮೆಂಟ್ ನಿರ್ಮಾಣ ಮಾಡದಂತೆ ಅಗ್ರಹಿಸಲಾಗಿತ್ತು ಕೊನೆಗೆ ಮಣಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕುಂದಾಪುರಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಇದೀಗ ಹಲವಾರು ಕಾರಣಗಳಿಂದಾಗಿ ಸ್ಥಗಿತಗೊಂಡಿದ್ದ ಕಾಮಗಾರಿ ಮತ್ತೆ ಆರಂಭಗೊಂಡಿದ್ದು ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಫ್ಲೈ ಓವರ್ ಕಾಮಗಾರಿ ನಡೆಸಲು ಬೇಕಾಗಿರುವ ಸಲಕರಣೆಗಳು ಸಿದ್ದಗೊಂಡಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ.  ಇನ್ನೆರಡು ದಿನಗಳಲ್ಲಿ ಚತುಷ್ಪತ ಕಾಮಗಾರಿ ಆರಂಭಗೊಳ್ಳುವ ಸೂಚನೆ ದೊರೆತಿದ್ದು, ಶಾಸ್ತ್ರಿ ವೃತ್ತದ ಇಕ್ಕೆಲಗಳ ಅಂಗಡಿ ಮುಗ್ಗಟ್ಟು ತೆರವು ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ಆದರೆ  ಕೆಲವೆ ದಿನಗಳಲ್ಲಿ ಮಳೆಗಾಲ ಶುರುವಾಗಲಿದ್ದು, ಪುನಃ ಕಾಮಗಾರಿ ಸ್ಥಗಿತಗೊಳ್ಳುವ ಸಾಧ್ಯತೆಯೂ ಇದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English