ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಮಾರು 25 ಮಂದಿ ಸಚಿವರ ಸಂಭವನೀಯ ನೂತನ ಸಚಿವ ಸಂಪುಟ ಪಟ್ಟಿಯನ್ನು ಸಿದ್ದಪಡಿಸಿದ್ದು, ಈ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಶಾಸಕರ ಹೆಸರಿರುವುದು ಮೂಲಗಳಿಂದ ತಿಳಿದುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ರಮಾನಾಥ ರೈ, ಯು.ಟಿ.ಖಾದರ್, ವಿನಯ್ ಕುಮಾರ ಸೊರಕೆ ಈ ಮೂವರ ಹೆಸರು ನೂತನ ಸಚಿವ ಸಂಪುಟ ಪಟ್ಟಿಯಲ್ಲಿರುವುದಾಗಿ ತಿಳಿದುಬಂದಿದೆ. ರಮಾನಾಥ ರೈ ಯವರು ಮೊದಲ ಹಂತದ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಇನ್ನುಳಿದಂತೆ ವಿನಯ್ ಕುಮಾರ ಸೊರಕೆ ಮತ್ತು ಶಾಸಕ ಅಭಯಚಂದ್ರ ಜೈನ್ ಮೊದಲ ಹಂತದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ಲಾಬಿ ನಡೆಸುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿವೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗು ಉಪಾಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಅಂತಿಮಪಟ್ಟಿಯನ್ನು ಬಿಡುಗಡೆಗೊಳಿಸಲಿದ್ದಾರೆ.
Click this button or press Ctrl+G to toggle between Kannada and English