ಮಂಗಳವಾರ : ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯ ಸರ್ಕಾರದ ನೂತನ ಸಚಿವ ಯು.ಟಿ.ಖಾದರ್ ರವರನ್ನು ಪಕ್ಷದ ಮುಖಂಡರು, ಅಪಾರ ಸಂಖ್ಯೆಯಲ್ಲಿ ನೆರೆದ ಕಾರ್ಯಕರ್ತರು ಹೂ ಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮೇಲೆ ನಂಬಿಕೆ ಇಟ್ಟು ಸಚಿವ ಸ್ಥಾನದ ಜವಾಬ್ದಾರಿಯನ್ನು ನೀಡಿದ್ದು, ಈ ಹುದ್ದೆಯನ್ನು ಸಮರ್ಪಕವಾಗಿ ಮತ್ತು ಪ್ರಾಮಾಣಿಕನಾಗಿ ನಿರ್ವಹಿಸುವುದಾಗಿ ಅವರು ಹೇಳಿದರು. ಜೊತೆಗೆ ಹಿರಿಯ ನಾಯಕರ ಸಲಹೆ ಪಡೆದು ಜಿಲ್ಲೆಯ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸುವುದಾಗಿ ಅವರು ತಿಳಿಸಿದರು. ಈ ಸಂದರ್ಭ ಅವರು ತಮ್ಮ ಗೆಲುವಿಗೆ ಸಹಕರಿಸಿದ ಕಾರ್ಯಕರ್ತರಿಗೆ ಹಾಗು ಮತದಾರರಿಗೆ ಕೃತಗ್ನತೆ ಸಲ್ಲಿಸಿದರು.
ಬಜ್ಪೆ ವಿಮಾನ ನಿಲ್ದಾಣದಿಂದ ಬೃಹತ್ ರ್ಯಾಲಿಯಲ್ಲಿ ಆಗಮಿಸಿದ ಅವರು ಕ್ಷೇತ್ರದ ಪ್ರಮುಖ ಧಾರ್ಮಿಕ ಕೇಂದ್ರಗಳಾದ ಉಳ್ಳಾಲ ದರ್ಗಾ, ಉಳ್ಳಾಲ ಭಗವತಿ ಚೀರುಂಭ ದೇವಸ್ಥಾನ, ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನ, ಸೋಮೇಶ್ವರ ಮತ್ತು ಸೆಬಾಸ್ಟಿಯನ್ ಚರ್ಚ್ ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಪಕ್ಷದ ಹಂಗಾಮಿ ಜಿಲ್ಲಾಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈಶ್ವರ ಉಳ್ಳಾಲ್, ಚಂದ್ರಹಾಸ ಕರ್ಕೇರ, ಕಣಚೂರು ಮೋನು ಮತ್ತಿತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English