ಬಂಟ್ವಾಳ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕನೋರ್ವನಿಗೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆಯೊಡ್ಡಿದ್ದ 53 ವರ್ಷದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಕಸ್ಟಡಿಗೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತ ಆರೋಪಿಯನ್ನು ವಿಟ್ಲದ ಕೊಂಡಗಾಯಿ ನಿವಾಸಿ ಉಮೇಶ್ ಎಂದು ಗುರುತಿಸಲಾಗಿದೆ.
ಘಟನೆಯ ವಿವರದಂತೆ, ಆಗಸ್ಟ್ 15ರಂದು ಅಳಿಕೆಯಿಂದ ಪುತ್ತೂರಿಗೆ ಪ್ರಯಾಣಿಸುತ್ತಿದ್ದ ಬಸ್ನಲ್ಲಿ ಬಾಲಕನ ಪಕ್ಕದಲ್ಲಿ ಕುಳಿತಿದ್ದ ಈತ, ಮಾರ್ಗಮಧ್ಯೆ ಆತನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಅಷ್ಟಕ್ಕೇ ನಿಲ್ಲದೆ, ಬಾಲಕ ಮನೆಗೆ ತಲುಪಿದ ಬಳಿಕವೂ ಅಲ್ಲಿಗೆ ತೆರಳಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ಬಾಲಕನ ಕಡೆಯವರು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆ 2012ರ ಕಲಂ 4(2) ಹಾಗೂ ಬಿಎನ್ಎಸ್ 2023ರ ಕಲಂ 351(2)ರ ಅಡಿಯಲ್ಲಿ ಪ್ರಕರಣ (ಮೊ.ಸಂ. 179/2026) ದಾಖಲಾಗಿತ್ತು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಸಲ್ಲಿಸಿದ ಬಳಿಕ ನ್ಯಾಯಾಧೀಶರು ಆತನಿಗೆ ನ್ಯಾಯಾಂಗ ಬಂಧನ ನೀಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









