ಮಂಗಳೂರು : ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಬಡ ಜನರ ಚಿಕಿತ್ಸೆಯ ಸಂಪೂರ್ಣ ಖರ್ಚನ್ನು ಸರ್ಕಾರ ಭರಿಸಲಿದ್ದು, ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಎರಡು ದಿನಗಳೊಳಗೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲಾಗುವುದು ಮತ್ತು ಆರೋಗ್ಯ ಜಾಗೃತಿಯ ಬಗ್ಗೆ ಜಿಲ್ಲಾವಾರು ಸಮೀಕ್ಷೆ ನಡೆಸಿ ಒಂದು ತಿಂಗಳೊಳಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದರು. ಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೈಸೂರಿನಲ್ಲಿ ಡೆಂಘಿ ಜ್ವರಕ್ಕೆ ಐದು ಮಕ್ಕಳು ಬಲಿಯಾಗಿದ್ದು ಈ ಬಗ್ಗೆ ಸೂಕ್ತ ರೀತಿಯ ತನಿಖೆ ನಡೆಸಿ ವರಧಿ ಸಲ್ಲಿಸುವಂತೆ ತಿಳಿಸಲಾಗಿದ್ದು ವರದಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಲ್ಲಿ ಅಂತವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ರಾಜ್ಯದ ಕೆಲ ಭಾಗಗಳಲ್ಲಿ ಸಾಂಕ್ರಾಮಿಕ ರೋಗಗಳು ಕಂಡುಬಂದಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಈಗಾಗಲೇ ಆರೋಗ್ಯ ಇಲಾಖೆಯ ಸಿಬ್ಬಂಧಿಗಳಿಗೆ ತಿಳಿಸಿದ್ದು ಯಾವುದಾದರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಬಗ್ಗೆ ವರಧಿಯಾದರೆ ಅಂತಹ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದಾಗಿ ಅವರು ತಿಳಿಸಿದರು.
Click this button or press Ctrl+G to toggle between Kannada and English