
ಮಂಗಳೂರು : ಉಡುಪಿಯ ಶಾಸಕ ಯಶ್ ಪಾಲ್ ಸುವರ್ಣ ಅವರ ಜನ್ಮದಿನದ ಸುಸಂದರ್ಭದಲ್ಲಿ ಅವರ ಬೆಂಬಲಿಗರು ಮತ್ತು ಅಭಿಮಾನಿ ಬಳಗ ಮಂಗಳೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ್ದಾರೆ. ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಸಮಾವೇಶಗೊಂಡ ಅಭಿಮಾನಿಗಳು, ಶಾಸಕರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಹಾಗೂ ಅವರ ಜನಸೇವೆಯ ಹಾದಿಯಲ್ಲಿ ಅಭಿವೃದ್ಧಿ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸಿ ರುದ್ರಾಭಿಷೇಕ ಮತ್ತು ಶಿವಪೂಜೆ ಸಲ್ಲಿಸಿದರು.
ಇದರೊಂದಿಗೆ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲೂ ಅಭಿಮಾನಿಗಳು ಒಟ್ಟುಗೂಡಿ ವಿಶೇಷ ಪೂಜೆ ನೆರವೇರಿಸುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಶುಭ ಹಾರೈಸಿದರು. ಕ್ಷೇತ್ರದ ಶಾಸಕರಾಗಿ ಅವರು ಹಮ್ಮಿಕೊಂಡಿರುವ ಕಾರ್ಯಗಳು ಯಶಸ್ವಿಯಾಗಲಿ ಮತ್ತು ಅವರು ಜನಪ್ರಿಯ ನಾಯಕರಾಗಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂಬ ಆಶಯವನ್ನು ಈ ಸಂದರ್ಭದಲ್ಲಿ ಬೆಂಬಲಿಗರು ವ್ಯಕ್ತಪಡಿಸಿದರು.

ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









