ಮಂಗಳೂರು : ಗೋವಾದಿಂದ ಮಂಗಳೂರು ಮತ್ತು ಉಡುಪಿ ಮಾರ್ಗವಾಗಿ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ದೊಡ್ಡ ಜಾಲವೊಂದನ್ನು ಅಬಕಾರಿ ಇಲಾಖೆ ಅಧಿಕಾರಿಗಳ ವಿಶೇಷ ತಂಡವು ಯಶಸ್ವಿಯಾಗಿ ಭೇದಿಸಿದೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ. ಎಚ್. ಅವರ ಆದೇಶದಂತೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ದಾಳಿಯ ವೇಳೆ ಯಾವುದೇ ಪರವಾನಗಿ ಇಲ್ಲದೆ ಗೋವಾದಿಂದ ಸಾಗಿಸಲಾಗುತ್ತಿದ್ದ 438 ಲೀಟರ್ ಅಕ್ರಮ ಮದ್ಯ ಹಾಗೂ ಸಾಗಾಟಕ್ಕೆ ಬಳಸಿದ್ದ ಸ್ವಿಫ್ಟ್ ಡಿಸೈರ್ ಕಾರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಅಕ್ರಮ ಕೃತ್ಯಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕ ಹಾಗೂ ಚಾಲಕ ಬಸವರಾಜು ಬೋವಿ ಮತ್ತು ನಾಗವೇಣಿ ನಾಯಕ್ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಮಂಗಳೂರು ಉಪವಿಭಾಗದ ಉಪ ಅಧೀಕ್ಷಕಿ ಗಾಯತ್ರಿ ಸಿ. ಎಚ್., ಬಂಟ್ವಾಳ ಉಪವಿಭಾಗ ಉಪ ಅಧೀಕ್ಷಕ ಸಂತೋಷ್ ಮೋಡಗಿ, ಬಂಟ್ವಾಳ ತಾಲೂಕು ವಲಯ ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಶಿವಣಗಿ, ತಲಪಾಡಿ ಚೆಕ್ ಪೋಸ್ಟ್ ನಿರೀಕ್ಷಕ ದತ್ತಗುರು ಅಥೆಣಿ ಹಾಗೂ ಉಪ ನಿರೀಕ್ಷಕರಾದ ಜಯಪ್ಪ, ಶಿವಶಂಕರ್, ಅಭಿಷೇಕ್ ಮತ್ತು ಪೇದೆ ಪ್ರಕಾಶ್ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಜಂಟಿ ಆಯುಕ್ತರ ಕಚೇರಿ ನಿರೀಕ್ಷಕಿ ಸುನಿತಾ ಅವರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಅಪರಾಧ, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









