ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತ್ಯುತ್ಸವ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಚ್ಚನಾಡಿ ದೇವಿನಗರದ ಮಾತೃಶ್ರೀ ಸತ್ಸಂಗ ಭಜನಾ ಮಂಡಳಿ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಭಕ್ತಿಪೂರ್ವಕ ಭಜನೆ ನಡೆಸಿಕೊಟ್ಟರು. ಪುರೋಹಿತ ಮನೋಜ್ ಶಾಂತಿ ಅವರ ನೇತೃತ್ವದಲ್ಲಿ ವಿಶೇಷ ಗುರುಪೂಜೆ ನೆರವೇರಿ ಪ್ರಸಾದ ವಿತರಣೆ ನಡೆಯಿತು.
ವಿಶೇಷವಾಗಿ ಆಯೋಜಿಸಲಾಗಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಸದಸ್ಯರೂ, ಗುರು ಶ್ರೇಷ್ಠರೂ ಆದ ಮಾಧವ ಸುವರ್ಣ ಯು. ಅವರನ್ನು ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಶುಭ ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ರಮಾನಾಥ್ ಸನಿಲ್, ಗೋಪಾಲ್ ಎಮ್., ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಗೌರವಾಧ್ಯಕ್ಷ ವಾಮನ್ ಕೆ. ಸೇರಿದಂತೆ ಸಂಘದ ಹಲವು ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









