ಗುಜರಾತ್ 6 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು

4:16 PM, Wednesday, June 5th, 2013
Share
1 Star2 Stars3 Stars4 Stars5 Stars
(5 rating, 3 votes)
Loading...

Narendra Modiಅಹಮದಾಬಾದ್:  ಗುಜರಾತ್ ವಿಧಾನಸಭೆಯ ನಾಲ್ಕು ಹಾಗೂ ಎರಡು ಲೋಕಸಭೆ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಆರು ಸ್ಥಾನಗಳಲ್ಲೂ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಮತ್ತಷ್ಟು ಬಲ ಬಂದಂತಾಗಿದೆ.

ಪೋರಬಂದರ್ ಮತ್ತು ಬನಸ್ಕಾಂತ ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಲಿಂಬ್ಡಿ, ಚೆತ್ಪುರ್, ಧೋರ್ಜಿ ಹಾಗೂ ಮಾರ್ವ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಸ್ಥಾನಗಳಲ್ಲೂ ಗೆಲುವು ಸಾಧಿಸಿದೆ. ಈ ಎಲ್ಲ ಕ್ಷೇತ್ರಗಳಿಗೆ ಕಳೆದ ಭಾನುವಾರ ಮತದಾನ ನಡೆದಿತ್ತು.

ಗುಜರಾತ್ ಉಪ ಚುನಾವಣೆಯ ಫಲಿತಾಂಶ ಹೊರ ಬಿಳುತ್ತಿದ್ದಂತೆ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಗುಜರಾತ್ ಉಪ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ಗೆ ಕಟ್ಟ ಕಡೆಯ ಎಚ್ಚರಿಕೆಯಾಗಿದೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English