- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಿಜೆಪಿ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಡ್ವಾಣಿ

lk advani [1]ನವದೆಹಲಿ: ಗೋವಾ ರಾಜಧಾನಿ ಪಣಜಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಗೈರು ಆಗಿದ್ದ ಆಡ್ವಾಣಿ,  ಸೋಮವಾರ ಬಿಜೆಪಿ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅವರು ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ಸೇರಿದಂತೆ ಪಕ್ಷದ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದು, ರಾಜಿನಾಮೆ ಪತ್ರವನ್ನು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ತನ್ನ ಆಪ್ತರಲ್ಲಿ ರವಾನಿಸಿದ್ದಾರೆ. ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ 2014ರ ಚುನಾವಣಾ ಪ್ರಚಾರ ಸಮಿತಿಯ ಸಾರಥ್ಯ ವಹಿಸಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು ರಾಜೀನಾಮೆ ಬಳಿಕ ಮಾಧ್ಯಮಕ್ಕೆ ಮಾತನಾಡಿ, ನಾನು ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದು, ತಾವು ಒಬ್ಬ ಕಾರ್ಯಕರ್ತನಾಗಿ ಪಕ್ಷದಲ್ಲಿ ಮುಂದುವರೆಯುವುದಾಗಿ ಹೇಳಿದ್ದಾರೆ. ಅಲ್ಲದೆ ಪಕ್ಷದಲ್ಲಿನ ಕೆಲವು ಬೆಳವಣಿಗೆಗಳ ಬಗ್ಗೆ ನೋವಿನಿಂದ ಮಾತನಾಡಿದ ಬಿಜೆಪಿ ಆಡ್ವಾಣಿ, ಪಕ್ಷದ ಸಿದ್ಧಾಂತಗಳಲ್ಲೂ ಭಾರೀ ಬದಲಾವಣೆಯಾಗುತ್ತಿದ್ದು, ಕೆಲವು ನಾಯಕರು ಪಕ್ಷದ ಮೂಲ ಉದ್ದೇಶವನ್ನೇ ಮರೆತ್ತಿದ್ದಾರೆ ಎಂದು ಆರೋಪಿಸಿದರು.

ಆಡ್ವಾಣಿ ಅನುಪಸ್ಥಿತಿಯಲ್ಲಿ 2014ರ ಲೋಕಸಭಾ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನಿನ್ನೆ ಮೋದಿ ಅವರನ್ನು ಆಯ್ಕೆ ಮಾಡಲಾಗಿದ್ದು. ಮೋದಿಗೆ ಪಟ್ಟ ಕಟ್ಟುವುದನ್ನು ಮೊದಲಿನಿಂದಲೂ ಪರೋಕ್ಷವಾಗಿ ವಿರೋಧಿಸುತ್ತಿದ್ದ ಆಡ್ವಾಣಿ ಗೋವಾ ಕಾರ್ಯಕಾರಣಿ ಸಭೆಯಿಂದಲೂ ದೂರ ಉಳಿಯುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದರು.

ಎಲ್.ಕೆ.ಆಡ್ವಾಣಿ ಅವರ ರಾಜೀನಾಮೆ ಪತ್ರ ಕೈಸೇರಿದ ಕೂಡಲೇ ಟ್ವೀಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರು, ತಾವು ಆಡ್ವಾಣಿ ಅವರ ರಾಜೀನಾಮೆ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಆಡ್ವಾಣಿ ರಾಜೀನಾಮೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಆಡ್ವಾಣಿ ಅವರು ರಾಜೀನಾಮೆ ನೀಡಬಾರದಿತ್ತು ಮತ್ತು ಅವರ ಬಗ್ಗೆ ನಾನು ವೈಯಕ್ತಿಕವಾಗಿ ಮಾತನಾಡಲ್ಲ ಎಂದು ಹೇಳಿದ್ದಾರೆ.