ಮಂಗಳೂರು : ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ) ಐಪಿಎಸ್ ಅಧಿಕಾರಿ ಸ್ಯಾಮ್ ವರ್ಗೀಸ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಸಿಐಡಿ ವಿಭಾಗದಲ್ಲಿ ಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರಿಗೆ ವರ್ಗಾಯಿಸಲಾಗಿದೆ.
ಈ ಹಿಂದೆ ಇಲ್ಲಿದ್ದ ಮಿಥುನ್ ಎಚ್.ಎನ್. ಅವರನ್ನು ಗದಗ ಜಿಲ್ಲೆಯ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾಯಿಸಿದ ಬಳಿಕ ಮಂಗಳೂರು ಡಿಸಿಪಿ ಹುದ್ದೆ ಖಾಲಿಯಿತ್ತು. ತೆರವಾಗಿದ್ದ ಈ ಪ್ರಮುಖ ಸ್ಥಾನಕ್ಕೆ ಇದೀಗ ಸ್ಯಾಮ್ ವರ್ಗೀಸ್ ಅವರನ್ನು ನಿಯೋಜಿಸಲಾಗಿದೆ.
ಕರ್ನಾಟಕ ಕೇಡರ್ನ 2022ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಸ್ಯಾಮ್ ವರ್ಗೀಸ್ ಅವರು ಮೂಲತಃ ಕೇರಳದ ಕೊಟ್ಟಾಯಂ ಜಿಲ್ಲೆಯವರು. ವೃತ್ತಿಜೀವನದ ಆರಂಭದಲ್ಲಿ ದಾವಣಗೆರೆಯ ಚನ್ನಗಿರಿ ಉಪವಿಭಾಗದ ಎಎಸ್ಪಿಯಾಗಿ ಸೇವೆ ಸಲ್ಲಿಸಿದ್ದ ಇವರು, ನಂತರ ಬೆಂಗಳೂರಿನ ಅಪರಾಧ ತನಿಖಾ ಇಲಾಖೆಯಲ್ಲಿ (ಸಿಐಡಿ) ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









