ಬೆಂಗಳೂರು: ಇಂದು ಸ್ಪೀಕರ್ ಕಚೇರಿಯಲ್ಲಿ 224ನೇ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಶಿವಕುಮಾರ್ ಅವರಿಗೆ ಬೆಳಗ್ಗೆ 10ಗಂಟೆಯ ಸುಮಾರಿಗೆ ಪ್ರಮಾಣವಚನ ಬೋಧಿಸಿದರು.
ಬಳಿಕ ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ತಮಗೆ ಸಚಿವ ಸ್ಥಾನ ತಪ್ಪಿಸಲು, ಸ್ವಾತಂತ್ರ್ಯ ಹೋರಾಟಗಾರರು, ಬುದ್ಧಿಜೀವಿಗಳು ಹಾಗು ಮಾಧ್ಯಮಗಳು ಸಂಚು ರೂಪಿಸಿದ್ದವು ಎಂದು ಆರೋಪಿಸಿದರು. ಅಲ್ಲದೆ ಮೊದಲ ಹಂತದಲ್ಲಿ ಸಚಿವ ಸ್ಥಾನ ತಪ್ಪಿಸುವುದರಲ್ಲಿ ಅವರು ಯಶಸ್ವಿಯೂ ಆಗಿದ್ದಾರೆ ಎಂದರು.
ಇನ್ನು ಡಿಕೆಶಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು, ನಾನೂ ಯಾರ ವಿರುದ್ಧವೂ ಸಂಚು ರೂಪಿಸಿಲ್ಲ. ಶಿವಕುಮಾರ್ ಅವರ ಅಕ್ರಮ ಗಣಿಗಾರಿಕೆ ನಡೆಸಿದ್ದಾರೆ. ಆ ಬಗ್ಗೆ ನನ್ನ ಬಳಿ ಸೂಕ್ತ ದಾಖಲೆಗಳಿವೆ ಎಂದು ತಿರುಗೇಟು ನೀಡಿದ್ದಾರೆ.
ಕಳಂಕಿತರಿಗೆ ಸಚಿವ ಸ್ಥಾನ ನೀಡಬೇಡಿ ಎಂದು ದೊರೆಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲೇ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು. ಹೀಗಾಗಿ ಇಂದು ಡಿಕೆಶಿ ದೊರೆಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
Click this button or press Ctrl+G to toggle between Kannada and English