ಮಣಿಪಾಲದಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ

7:00 PM, Friday, June 21st, 2013
Share
1 Star2 Stars3 Stars4 Stars5 Stars
(No Ratings Yet)
Loading...

Manipal Rapeಉಡುಪಿ  : ಮಣಿಪಾಲ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯನ್ನು ಮೂವರು ಕಾಮಾಂಧರು ಅಪಹರಿಸಿ, ಅತ್ಯಾಚಾರ ಮಾಡಿದ್ದಾರೆ. ವಿದ್ಯಾರ್ಥಿನಿಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರ ರಾತ್ರಿ 11.30ರ ಸುಮಾರಿಗೆ ರಾತ್ರಿ ಲೈಬ್ರರಿಯಿಂದ ಹಾಸ್ಟೆಲ್ ಗೆ ಹೋಗಲು ವಿದ್ಯಾರ್ಥಿನಿ ತೆರಳುತ್ತಿದ್ದ ಕೇರಳ ಮೂಲದ 22 ವರ್ಷ ಪ್ರಾಯದ ಮಣಿಪಾಲ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯನ್ನು ಆಟೋರಿಕ್ಷಾದಲ್ಲಿ ಅಪಹರಿಸಿದ, ದುಷ್ಕರ್ಮಿಗಳು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ನಂತರ ಆಕೆಯನ್ನು ಮಣಿಪಾಲದ ಮಾಂಡವಿ ಪ್ಲಾಜಾದ ಬಳಿ ಬಿಟ್ಟು ಪರಾರಿಯಾಗಿದ್ದಾರೆ.

Manipal Rapeಆಟೋದಲ್ಲಿ ಬಂದ ಮೂವರು, ವಿಳಾಸ ಕೇಳುವ ನೆಪದಲ್ಲಿ ಆಕೆಯನ್ನು ಮಾತನಾಡಿಸಿದ್ದಾರೆ. ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದಂತೆಯೇ, ಆಕೆಯನ್ನು ಆಟೋ ರಿಕ್ಷಾಗೆ ತುಂಬಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಎಂದು ವಿದ್ಯಾರ್ಥಿನಿ ಸ್ನೇಹಿತರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಆಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ. ಆಕೆಯ ಒಂದು ಕಾಲು ಮುರಿದು ಹೋಗಿದೆ, ಘಟನೆಯಿಂದಾಗಿ ಯುವತಿ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಮಣಿಪಾಲ ಕಾಲೇಜಿನ ಆಡಳಿತ ಮಂಡಳಿಯವರು ಸಹ ಮಣಿಪಾಲ ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿಲ್ಲ ಎಂದು ಎಸ್ಪಿ ಅಶೋಕ್‌ ಗೋಯಲ್‌ ಹೇಳಿದ್ದಾರೆ. ಉಡುಪಿ ಶಾಸಕ ಪ್ರಮೋದ್‌ ಮಧ್ವರಾಜ್‌ ಮಣಿಪಾಲ ಠಾಣೆಗೆ ಭೇಟಿ ನೀಡಿ ಘಟನೆಯ ವಿವರ ಪಡೆದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English