ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ, ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಹಯೋಗದಲ್ಲಿ ಬಂಟ್ಸ್ ಹಾಸ್ಟೇಲ್ನ ಓಂಕಾರನಗರದಲ್ಲಿ ಆಯೋಜಿಸಲಾಗಿರುವ 20 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅತ್ಯಂತ ಸಂಭ್ರಮದ ಚಾಲನೆ ಲಭಿಸಿದೆ. ಶರವು ದೇವಸ್ಥಾನದ ಸಮೀಪದಲ್ಲಿರುವ ಶ್ರೀ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ, ಶ್ರೀ ಸಿದ್ಧಿವಿನಾಯಕ ದೇವರ ಮೃತ್ತಿಕಾ ಮೂರ್ತಿಯನ್ನು ಭಕ್ತಿಯಿಂದ ಓಂಕಾರನಗರದ ಪಂಡಾಲ್ಗೆ ತಂದು ಪ್ರತಿಷ್ಠಾಪಿಸಲಾಯಿತು.
ಈ ಶುಭ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷರು ಹಾಗೂ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೊಡಿಯಾಲ್ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ಗುತ್ತು, ಟ್ರಸ್ಟಿಗಳಾದ ಮಂಜುನಾಥ ಭಂಡಾರಿ ಶೆಡ್ಯೆ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೆ. ಬಾಲಕೃಷ್ಣ ಶೆಟ್ಟಿ ಬೆಳ್ಳಿಬೆಟ್ಟುಗುತ್ತು, ಕೃಷ್ಣಪ್ರಸಾದ್ ರೈ ಬೆಳ್ಳಿಪಾಡಿ, ಡಾ. ಆಶಾಜ್ಯೋತಿ ರೈ ಬಂಬ್ರಾಣ, ಮಾತೃ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ. ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ ಮತ್ತು ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಪುಂಚಮೆ ಉಪಸ್ಥಿತರಿದ್ದರು.
ಇದಲ್ಲದೆ, ಮಂಗಳೂರು ತಾಲೂಕು ಸಮಿತಿ ಸಂಚಾಲಕ ದಿವಾಕರ ಸಾಮಾನಿ ಚೇಳಾರ್ಗುತ್ತು, ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಸಮನ್ವಯಕಾರರು ಭಾಗವಹಿಸಿದ್ದರು. ಇದೇ ವೇಳೆ ವಿವಿಧ ಬಂಟರ ಸಂಘಟನೆಗಳಿಂದ ಸಮರ್ಪಿಸಲಾದ ಹೊರೆಕಾಣಿಕೆಗಳನ್ನು ಹೊರೆಕಾಣಿಕೆ ಸಮಿತಿಯ ಸಂಚಾಲಕ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ಮತ್ತು ಸಹ ಸಂಚಾಲಕ ಹರೀಶ್ ಶೆಟ್ಟಿ ಬಜಪೆ ಅವರು ಅತ್ಯಂತ ಗೌರವದಿಂದ ಸ್ವೀಕರಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









