ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಕೆ.ಜೆ.ಜಾರ್ಜ್

9:09 PM, Sunday, June 23rd, 2013
Share
1 Star2 Stars3 Stars4 Stars5 Stars
(No Ratings Yet)
Loading...

Home Minister KJ Georgeಉಡುಪಿ:  ಮಣಿಪಾಲದಲ್ಲಿ ಜೂನ್ 20 ರಂದು ನಡೆದ ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಗೃಹ ಸಚಿವ ಕೆ.ಜೆ.ಜಾರ್ಜ್  ಮಣಿಪಾಲ ಆಸ್ಪತ್ರೆಗೆ ಇಂದು ಬೆಳಿಗ್ಗೆ ಭೇಟಿ ನೀಡಿ ದೌರ್ಜನ್ಯಕ್ಕೊಳಗಾಗಿರುವ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.

ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದು, ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದರು.

ಪಶ್ಚಿಮ ವಲಯ ಐಜಿಪಿ ಪ್ರತಾಪ್ ರೆಡ್ಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ. ಎಂಟು ಪೊಲೀಸ್ ತಂಡಗಳನ್ನು ರಚಿಸಿ ಪ್ರತಿ ಆಟೋಗಳನ್ನು ಪರೀಕ್ಷಿಸಲಾಗುತ್ತಿದೆ. ಡಿಸಿ ಮತ್ತು ಎಸ್ಪಿಯವರ ನೇತೃತ್ವದಲ್ಲಿ ಮಣಿಪಾಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಪೂರ್ಣ ಪೊಲೀಸ್ ಭದ್ರತೆಯನ್ನು ಅಳವಡಿಸಲಾಗಿದೆ ಎಂದು  ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಎಸ್ಪಿ ಬೋರಲಿಂಗಯ್ಯ, ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯ್‌ ಕುಮಾರ್‌ ಸೊರಕೆ, ಉಡುಪಿ ಶಾಸಕ ಪ್ರಮೋದ್‌ ಮಧ್ವರಾಜ್‌ ಉಪಸ್ಥಿತರಿದ್ದರು.

Home Minister KJ George

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English