ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆಯ ಸಂದರ್ಭವನ್ನು ವ್ಯಂಗ್ಯವಾಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ವಿನೂತನ ಮಾದರಿಯ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರದ ಆಡಳಿತಾವಧಿಯಲ್ಲಿ ದೇಶಾದ್ಯಂತ ನಿರುದ್ಯೋಗ ಪ್ರಮಾಣ ವಿಪರೀತವಾಗಿ ಹೆಚ್ಚಳವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಹನವಾಸ್ ಇಬ್ರಾಹಿಂ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನಾ ಸಭೆಯಲ್ಲಿ ಸಚಿವ ಎಚ್. ಸಿ. ಬಾಲಕೃಷ್ಣ ಅವರು ಭಾಗವಹಿಸಿ ಬೆಂಬಲ ಸೂಚಿಸಿದರು. ಮೋದಿ ಆಡಳಿತದಲ್ಲಿ ಉದ್ಯೋಗ ಸಿಗದೆ ಯುವಜನತೆ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಪ್ರತಿಭಟನಾ ಸ್ಥಳದಲ್ಲಿ ಸಿದ್ಧಪಡಿಸಲಾಗಿದ್ದ ಪಕೋಡಾ ಹಾಗೂ ಬಜ್ಜಿ ಸವಿಯುವ ಮೂಲಕ ನಾಯಕರು ಸರ್ಕಾರದ ಧೋರಣೆಯನ್ನು ಮಾರ್ಮಿಕವಾಗಿ ಖಂಡಿಸಿದರು.
ವಿಡಿಯೋ
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









