ಮೂಡುಬಿದಿರೆ : ಕಾರ್ಕಳಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕರ್ನಾಟಕ ಸರ್ಕಾರದ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು ಭೀಕರ ರಸ್ತೆ ಅಪಘಾತವೊಂದರಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಚಿಲಿಂಬಿ ಬಳಿ ಎದುರಿನಿಂದ ಬಂದ ಖಾಸಗಿ ಬಸ್ ಮತ್ತು ಇವರ ಕಾರಿನ ನಡುವೆ ಪ್ರಚಂಡ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಜ್ಜುಗುಜ್ಜಾಗಿದ್ದು, ರಮಾನಾಥ್ ರೈ ಅವರ ಕೈ ಹಾಗೂ ಕಾಲಿಗೆ ಗಾಯಗಳಾಗಿವೆ.
ಘಟನೆ ನಡೆದ ತಕ್ಷಣವೇ ಮೂಡುಬಿದಿರೆ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಜಗದೀಶ್, ಶಿಶಿರ್ ಹಾಗೂ ಸ್ಥಳೀಯ ನಾಗರಿಕರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಜಜ್ಜುಗುಜ್ಜಾದ ಕಾರಿನೊಳಗೆ ಸಿಲುಕಿಕೊಂಡಿದ್ದ ಮಾಜಿ ಸಚಿವರು ಹಾಗೂ ಅವರ ಚಾಲಕನನ್ನು ಹರಸಾಹಸ ಪಟ್ಟು ಹೊರತೆಗೆದು, ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಪ್ರಸ್ತುತ ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









