ಮಂಗಳೂರು : ಪಣಂಬೂರು ಬೀಚ್ಗೆ ಎದುರಾಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರೇಲರ್ ಲಾರಿಯೊಂದು ದಿಢೀರನೆ ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ಬೈಕಂಪಾಡಿಯಿಂದ ಕೂಳೂರು ಕಡೆಗೆ ಸಾಗುವ ಮಾರ್ಗದಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ರಸ್ತೆಯಲ್ಲೇ ಲಾರಿ ಸಿಲುಕಿಕೊಂಡಿದ್ದರಿಂದ ಕಿಲೋಮೀಟರ್ಗಟ್ಟಲೆ ಸಾಲಾಗಿ ವಾಹನಗಳು ಸಾಲುಗಟ್ಟಿ ನಿಂತು, ದೀರ್ಘಕಾಲ ಕಾಯಬೇಕಾಗಿ ಬಂದ ಪ್ರಯಾಣಿಕರು ಹಾಗೂ ಸವಾರರು ತೀವ್ರ ಕಿರಿಕಿರಿ ಅನುಭವಿಸಿದರು.
ಘಟನಾ ಸ್ಥಳಕ್ಕೆ ಧಾವಿಸಿದ ಸಂಚಾರ ವಿಭಾಗದ ಪೊಲೀಸರು ರಸ್ತೆಗೆ ಅಡ್ಡಲಾಗಿ ನಿಂತಿದ್ದ ಟ್ರೇಲರ್ ಲಾರಿಯನ್ನು ತೆರವುಗೊಳಿಸಿ, ಸುಗಮ ವಾಹನ ಸಂಚಾರಕ್ಕೆ ಹಾದಿ ಮಾಡಿಕೊಡಲು ಸಮರಪಾದಾದಿಯಲ್ಲಿ ಕಾರ್ಯಾಚರಣೆ ನಡೆಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









