ಬಜಪೆ : ಮಂಗಳೂರಿನ ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಚೀಟಿಂಗ್ (ವಂಚನೆ) ಪ್ರಕರಣವೊಂದರಲ್ಲಿ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ವಾಪಸ್ ಬಿಡುಗಡೆ ಮಾಡಲು ಇನ್ಸ್ಪೆಕ್ಟರ್ ಬಾಲಕೃಷ್ಣ ₹25,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಸಂಬಂಧ ದೂರುದಾರರಿಂದ ₹5,000 ಮುಂಗಡ ಲಂಚದ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಇನ್ಸ್ಪೆಕ್ಟರ್ ನನ್ನು ನೇರವಾಗಿ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಅಪರಾಧ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









