ಬೆಂಗಳೂರು : ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರನ್ನು ಅವರ ಕಚೇರಿಯಲ್ಲೇ ಕತ್ತು ಕೊಯ್ದ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಟ್ಯಾನರಿ ರಸ್ತೆಯ ಈದ್ಗಾ ಕಾಂಪ್ಲೆಕ್ಸ್ ನಲ್ಲಿಯ ಕ್ರೆಡಿಟ್ ಕೋ ಆಪರೇಟಿವ್ ಕಚೇರಿಯಲ್ಲಿಯೇ ಶಂಷಿಲ್ ಉದಾ (63) ಕೊಲೆಯಾದ ದುರ್ದೈವಿ. ಬುಧವಾರ ಬೆಳಗ್ಗೆ ಶಂಷಿಲ್ ಅವರನ್ನು ಕೊಲೆ ಮಾಡಲಾಗಿದೆ.
ಪ್ರತಿದಿನ ಶಂಷಿಲ್ 8.30ಕ್ಕೆ ಸೊಸೈಟಿಗೆ ಆಗಮಿಸುತ್ತಿದ್ದರು. ಬುಧವಾರ ಸಹ ಅವರು ಕಚೇರಿಗೆ ಆಗಮಿದ ಕೂಡಲೇ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಬೆಳಗ್ಗೆ 10 ಗಂಟೆ ವೇಳೆಗೆ ಸೊಸೈಟಿಯ ಕಂಪ್ಯೂಟರ್ ಆಪರೇಟರ್ ಆಗಮಿಸಿದಾಗ ಕೊಲೆಯಾದ ವಿಷಯ ಬೆಳಕಿಗೆ ಬಂದಿದೆ. ಡಿ.ಜೆ.ಹಳ್ಳಿ ಪೊಲೀಸರು ಸೊಸೈಟಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ.
ಶಂಷಿಲ್ ಇಂಗ್ಲಿಷ್ ಪತ್ರಿಕೆಯೊಂದನ್ನು ನಡೆಸುತ್ತಿದ್ದರು. ಆದ್ದರಿಂದ ಹಳೆಯ ದ್ವೇಷವಿರಬಹುದೇ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸೊಸೈಟಿ ದೋಚಲು ಬಂದ ಕಳ್ಳರು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Click this button or press Ctrl+G to toggle between Kannada and English