ಮೂಡುಬಿದಿರೆ : ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಕ್ರಿಯ ಬಿಜೆಪಿ ಯುವ ನಾಯಕ ಹಾಗೂ ಉದ್ಯಮಿಯಾಗಿದ್ದ ಎಕ್ಕಾರು ನಿವಾಸಿ ಪ್ರತೀಕ್ ಶೆಟ್ಟಿ (39) ಅವರು ತೀವ್ರ ಅನಾರೋಗ್ಯದ ಕಾರಣದಿಂದಾಗಿ ಸೆಪ್ಟೆಂಬರ್ 22ರಂದು ಕೊನೆಯುಸಿರೆಳೆದಿದ್ದಾರೆ.
ವೃತ್ತಿಯಲ್ಲಿ ಕ್ಯಾಟರಿಂಗ್ ಉದ್ಯಮ ನಡೆಸುತ್ತಿದ್ದ ಪ್ರತೀಕ್ ಶೆಟ್ಟಿ ಅವರು, ರಾಜಕೀಯವಾಗಿ ಬಿಜೆಪಿ ಮೂಲ್ಕಿ-ಮೂಡುಬಿದಿರೆ ಮಂಡಲ ಯುವಮೋರ್ಚಾದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಜಿಲ್ಲಾ ಮಟ್ಟದಲ್ಲೂ ಯುವಮೋರ್ಚಾದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.
ತಮ್ಮ ಎಕ್ಕಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಧಾರ್ಮಿಕ, ಸಾಮಾಜಿಕ ಮತ್ತು ಸಾರ್ವಜನಿಕ ಸೇವಾ ಕೈಂಕರ್ಯಗಳಲ್ಲಿ ಮುಂಚೂಣಿಯಲ್ಲಿದ್ದ ಅವರು, ಅಪಾರ ಬಂಧು-ಮಿತ್ರರು ಹಾಗೂ ಅಭಿಮಾನಿಗಳನ್ನು ಸಂಪಾದಿಸಿದ್ದರು. ಇವರ ಅಕಾಲಿಕ ನಿಧನಕ್ಕೆ ವಿವಿಧ ಸಂಘಟನೆಗಳ ಗಣ್ಯರು, ಪಕ್ಷದ ಕಾರ್ಯಕರ್ತರು ತೀವ್ರ ಕಂಬನಿ ಮಿಡಿದಿದ್ದಾರೆ.
ಪ್ರತೀಕ್ ಶೆಟ್ಟಿ ಅವರ ಅಕಾಲಿಕ ನಿಧನಕ್ಕೆ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. “ಭಗವಂತನು ಅಗಲಿದ ಸಹೃದಯಿ ಪ್ರತೀಕ್ ಶೆಟ್ಟಿ ಅವರ ದಿವ್ಯಾತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬಸ್ಥರಿಗೆ ಹಾಗೂ ಆತ್ಮೀಯರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ಅವರು ಪ್ರಾರ್ಥಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









