ಉಡುಪಿ: ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿಯ ರೇಪ್ ಪ್ರಕರಣದಲ್ಲಿ ಆರೋಪಿಯಾಗಿರುವ ಆನಂದನ ಐದು ದಿನಗಳ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಕಾರಣ ಶುಕ್ರವಾರ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆತನಿಗೆ ಜುಲೈ 15ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇನ್ನೊಬ್ಬ ಆರೋಪಿ ಹರಿಪ್ರಸಾದ್ ನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಆತನನ್ನು ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಯೋಗೀಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಭದ್ರತಾ ಕಾರಣಗಳಿಂದಾಗಿ ಆನಂದನನ್ನು ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸಬೇಕೆಂದು ನ್ಯಾಯಾಧೀಶರು ಆದೇಶ ನೀಡಿದ್ದಾರೆ.
Click this button or press Ctrl+G to toggle between Kannada and English