ಮಂಗಳೂರು : ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ತನಿಖೆಗೆ ರಚಿಸಲಾದ ಎಸ್.ಐ.ಟಿ (SIT) ತಂಡದ ಬದಲಾವಣೆಯ ಕುರಿತು ಕೇಳಿಬರುತ್ತಿರುವ ಆಗ್ರಹಗಳ ಹಿನ್ನೆಲೆಯಲ್ಲಿ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಾಧ್ಯಮಗಳಿಗೆ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ತಮಗೆ ಪೊಲೀಸ್ ಅಧಿಕಾರಿಯಾದ ಶಶಿಕುಮಾರ್ ಅವರ ಮೇಲೆ ಯಾವುದೇ ರೀತಿಯ ವೈಯಕ್ತಿಕ ದ್ವೇಷ ಅಥವಾ ವಿರೋಧವಿಲ್ಲ ಎಂದು ಅವರು ಈ ವೇಳೆ ಖಚಿತಪಡಿಸಿದ್ದಾರೆ.
ಆದರೆ, ಈ ಪ್ರಕರಣದಲ್ಲಿ ಸಾರ್ವಜನಿಕರೇ ಅವರ ವಿರುದ್ಧ ಅಪಸ್ವರ ಎತ್ತಿದ್ದು, ಹಲವು ದೂರುಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಮಟ್ಟಣ್ಣನವರ್ ತಿಳಿಸಿದರು. ನಮಗೆ ತನಿಖೆಯನ್ನು ಯಾರು ನಡೆಸುತ್ತಾರೆ ಎಂಬುದರ ಬಗ್ಗೆ ಅಭ್ಯಂತರವಿಲ್ಲ, ಸಾಮಾನ್ಯ ಪೊಲೀಸ್ ಕಾನ್ಸ್ಟೇಬಲ್ ದರ್ಜೆಯ ಅಧಿಕಾರಿಯೇ ತನಿಖೆ ನಡೆಸಿದರೂ ನಮಗೆ ಯಾವುದೇ ರೀತಿಯ ಆಕ್ಷೇಪಗಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಈ ಸಂಪೂರ್ಣ ಮರುತನಿಖೆಯು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯುತ್ತಿರುವುದರಿಂದ, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಯವರೇ ಇದಕ್ಕೆ ನೇರ ಉತ್ತರದಾಯಿಯಾಗಿದ್ದಾರೆ. ಸಾರ್ವಜನಿಕರ ಮನಸ್ಸಿನಲ್ಲಿರುವ ಪ್ರತಿಯೊಂದು ಪ್ರಶ್ನೆಗೂ ಮುಖ್ಯಮಂತ್ರಿಗಳೇ ಸೂಕ್ತ ಉತ್ತರ ನೀಡಬೇಕಾಗಿದೆ ಎಂದು ಗಿರೀಶ್ ಮಟ್ಟಣ್ಣನವರ್ ಪ್ರತಿಪಾದಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









