ಮಂಗಳೂರು : ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಜಿಲ್ಲಾ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲೆ ಇದರ 2025/2026ನೇ ಸಾಲಿನ ವಾರ್ಷಿಕ ಮಹಾಸಭೆಯು ಬಿ. ಸಿ. ರೋಡ್ನ ಲಯನ್ಸ್ ಸೇವಾ ಮಂದಿರದಲ್ಲಿ ಮಂಗಳವಾರ (ಸೆಪ್ಟೆಂಬರ್ 29) ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಇಸ್ಮಾಯಿಲ್ ಬನಾರಿ ಅವರು ಬಂದಿದ್ದ ಎಲ್ಲ ಗಣ್ಯರನ್ನು ಮತ್ತು ಸದಸ್ಯರನ್ನು ಸ್ವಾಗತಿಸಿದರು.
ಸಂಘದ ಜಿಲ್ಲಾ ಅಧ್ಯಕ್ಷರಾದ ಧನ್ ರಾಜ್ ಶೆಟ್ಟಿ ಫರಂಗಿಪೇಟೆ, ಗೌರವಾಧ್ಯಕ್ಷ ರಾಜಶೇಖರ್ ಶೆಟ್ಟಿ ಕುಡ್ತಮುಗೇರು, ಕಾರ್ಯದರ್ಶಿ ಮಹೇಶ್ ಬೋಲಾರ್ ಹಾಗೂ ಕೋಶಾಧಿಕಾರಿ ಬೆನೆಟ್ ಡಿಸಿಲ್ವಾ ಮಂಗಳೂರು ಅವರ ಮುಖಂಡತ್ವದಲ್ಲಿ ಈ ಮಹಾಸಭೆ ಜರುಗಿತು. ಸಭೆಯಲ್ಲಿ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಮಂಗಳೂರು ತಾಲೂಕುಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಂಘಟನೆಯ ಮುಂದಿನ ನೂತನ ಯೋಜನೆಗಳ ಕುರಿತು ಚರ್ಚಿಸಿ ರೂಪುರೇಷೆ ಸಿದ್ಧಪಡಿಸಲಾಯಿತು. ಜೊತೆಗೆ ಸದಸ್ಯರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು.
ಇದೇ ವೇಳೆ 2026/2028ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಧನ್ ರಾಜ್ ಶೆಟ್ಟಿ ಫರಂಗಿಪೇಟೆ ಅವರು ಮರುಆಯ್ಕೆಯಾದರೆ, ನೂತನ ಕಾರ್ಯದರ್ಶಿಯಾಗಿ ಸಂತೋಷ್ ಕುರಿಯಾಳ ಹಾಗೂ ಕೋಶಾಧಿಕಾರಿಯಾಗಿ ಮಾತುಕುಟ್ಟಿ ಧರ್ಮಸ್ಥಳ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಲೋಹಿತ್ ಬ್ರಹ್ಮರಕೂಟ್ಲ ಅವರು ಉಪಸ್ಥಿತರಿದ್ದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









