ಮಂಗಳೂರು: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಹಕಾರಿ ಪಿತಾಮಹ ದಿ| ಮೊಳಹಳ್ಳಿ ಶಿವರಾವ್ ಸ್ಮರಣಾರ್ಥಕ ಹತ್ತನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮೊಳಹಳ್ಳಿ ಶಿವರಾವ್ ಸ್ಮಾರಕ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ಇಂದು ಸಂಜೆ ನಡೆಯಿತು.
ಪ್ರತಿಭಾನಿವಿತರನ್ನು ರೆ| ಪಾ| ಜೋಸೆಫ್ ರೊಡ್ರಿಗಸ್ ಎಸ್. ಜೆ. ಶಾಲು ಹೊದಿಸಿ ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿ ಪತ್ರ ನೀಡಿ ಪುರಸ್ಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ. ಎನ್ ರಾಜೇಂದ್ರ ಕುಮಾರ್ ವಹಿಸಿದ್ದರು.
ವಿದ್ಯೆ ಕಲಿಯುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ದೇವರು ಕೊಟ್ಟ ಬುದ್ದಿಯನ್ನು ವಿದ್ಯೆ ಕಲಿಯುವ ಮೂಲಕ ಉಪಯೋಗಿಸಿ ಶ್ರೇಷ್ಠ ವ್ಯಕ್ತಿಗಳಾಗಬೇಕು ಎಂದು ಪ್ರಶಸ್ತಿ ವಿತರಿಸಿದ ಬಳಿಕ ರೆ| ಪಾ| ಜೋಸೆಫ್ ರೊಡ್ರಿಗಸ್ ಹೇಳಿದರು.
ಮಕ್ಕಳ ಪ್ರತಿಭೆಗೆ ಪೋಷಕರು ಬೆನ್ನೆಲುಬಾದರೆ ಮಾತ್ರ ಪ್ರತಿಭೆ ಚಿಗುರೊಡೆಯಲು ಸಾಧ್ಯ ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ವ್ಯವಸ್ಥಾಪಕ ನಿರ್ದೇಶಕ ಪಿ. ನಾರಾಯಣ್ ಕಾಮತ್, ನಿರ್ದೇಶಕ ಬಿ. ನಿರಂಜನ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English