ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾನೆಯ ವೇಳೆಗೆ ಭೀಕರ ಗುಡುಗು, ಮಿಂಚು ಹಾಗೂ ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣವಾಗಿ ಜಖಂಗೊಂಡಿದೆ.
ಸ್ಥಳೀಯ ನಿವಾಸಿ ನಾಗೇಶ್ ಕುಲಾಲ್ ಎಂಬುವವರಿಗೆ ಸೇರಿದ ಮನೆಗೆ ಬೆಳಗಿನ ಜಾವ ಸುಮಾರು 4 ಗಂಟೆಯ ವೇಳೆಗೆ ಸಿಡಿಲು ಅಪ್ಪಳಿಸಿದೆ. ಸಿಡಿಲಿನ ತೀವ್ರತೆಗೆ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮೇಲ್ಛಾವಣಿಯ ಹಂಚುಗಳು ಹಾಗೂ ಕಿಟಕಿಯ ಗ್ಲಾಸ್ಗಳು ಪುಡಿಪುಡಿಯಾಗಿ ಚೆಲ್ಲಾಪಿಲ್ಲಿಯಾಗಿವೆ.
ಘಟನೆ ಸಂಭವಿಸಿದ ವೇಳೆ ಮನೆಯಲ್ಲಿದ್ದ ನಾಗೇಶ್ ಕುಲಾಲ್ ಅವರ ಪತ್ನಿ ಕುಶಲ ಎಂಬುವವರು ಸಿಡಿಲಿನ ಭೀಕರತೆಗೆ ತೀವ್ರ ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಾದ್ಯಂತ ಏಕಾಏಕಿ ಸುರಿದ ಈ ಧೋ ಅಂದ ಮಳೆಯಿಂದಾಗಿ ವ್ಯಾಪಕ ನಷ್ಟ ಸಂಭವಿಸಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









