ಮಂಗಳೂರು: ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಮಂಗಳೂರಿನ ಜಿಲ್ಲಾ ವೆನ್ ಲಾಕ್ ಮಕ್ಕಳ ಆಸ್ಪತ್ರೆಯ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ ಹಾಗೂ ಪರಿಸರ ಇಲಾಖೆ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರಲ್ಲಿ ಜನಸಂಖ್ಯಾ ಸ್ಪೋಟದ ಬಗ್ಗೆ ಜಾಗೃತಿ ಇರಬೇಕು, ಸರ್ಕಾರ ಜನಸಂಖ್ಯಾ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯು ಜನಸಂಖ್ಯಾ ನಿಯಂತ್ರಣದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ದೇಶದ ಪ್ರತಿಯೊಬ್ಬ ನಾಗರಿಕರು ಜನಸಂಖ್ಯೆಯನ್ನು ನಿಯಂತ್ರಿಸುವಲ್ಲಿ ತಮ್ಮ ಜವಾಬ್ದಾರಿಯನ್ನು ಅರಿತಿರಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್. ಲೋಬೋ ವಹಿಸಿದ್ದರು, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಮೊಯ್ದೀನ್ ಬಾವಾ ಮುಖ್ಯ ಅತಿಥಿಗಳಾಗಿದ್ದರು. ದ.ಕ. ಜಿಲ್ಲಾಧಿಕಾರಿ ಎನ್. ಪ್ರಕಾಶ್, ಮುಖ್ಯ ಕಾರ್ಯನಿರ್ವಹರ್ಣಾಧಿಕಾರಿ ವಿಜಯಪ್ರಕಾಶ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English
August 22nd, 2013 at 13:52:15
super news