ರಾಜ್ಯ ಕಾಂಗ್ರೆಸ್ ಸರಕಾರ ಕಳ್ಳಕಾಕರ ಸರಕಾರವಾಗಿದೆ : ನಳಿನ್ ಕುಮಾರ್

4:25 PM, Friday, July 12th, 2013
Share
1 Star2 Stars3 Stars4 Stars5 Stars
(4 rating, 3 votes)
Loading...

Bantwal BJPಬಂಟ್ವಾಳ: ರಾಜ್ಯ ಸರಕಾರದ ಹೊರಡಿಸಿರುವ ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ನೀತಿಯನ್ನು ವಿರೋಧಿಸಿ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ವತಿಯಿಂದ ಗುರುವಾರ ಬಿ.ಸಿ ರೋಡಿನ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಅಧಿಕಾರ ಬಂದು ಎರಡು ತಿಂಗಳಲ್ಲಿಯೇ  ಪಂಚಾಯತ್ ಸದಸ್ಯರ ಹಕ್ಕನ್ನು ಮೊಟಕುಗೊಳಿಸಲು ಮುಂದಾಗಿರುವ ಕ್ರಮ ಸರಿಯಲ್ಲ, ಪಂಚಾಯತ್ ರಾಜ್ ಕಾಯಿದೆಗೆ ತಿದ್ದುಪಡಿ ತರುವ ಕರಾಳ ಮಸೂದೆಯನ್ನು ರಾಜ್ಯ ಸರಕಾರ ಜಾರಿಗೊಳಿಸಲು ಮುಂದಾಗಿರುವುದು ಅಧಿಕಾರ ವಿಕೇಂದ್ರೀಕರಣದ ವ್ಯವಸ್ಥೆಯನ್ನು ಕಿತ್ತುಗೊಳ್ಳುವ ಪ್ರಜಾತಂತ್ರ ವಿರೋಧಿ ನಿಲುವಾಗಿದೆ ಎಂದು ಸಂಸದ ನಳಿನ್ ಕುಮಾರ್ ರವರು ಹೇಳಿದರು.

ಮೂಡಬಿದಿರೆಯಲ್ಲಿ ಜೈನ ಗುರು ಬಸದಿಯಲ್ಲಿ ಕಳ್ಳತನ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುವ ಮೂಲಕ ಕಾನೂನು ಹದಗೆಟ್ಟಿದ್ದು, ಇದನ್ನು ಸಂರಕ್ಷಿಸಬೇಕಾದ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರಕಾರ ಪಂಚಾಯತ್ ಸದಸ್ಯರ ಮೇಲೆ ಬ್ರಹ್ಮಾಸ್ತ್ರ ಬಿಡುತ್ತಿದೆ. ರಾಜ್ಯ ಕಾಂಗ್ರೆಸ್ ಸರಕಾರ ಕಳ್ಳಕಾಕರ ಸರಕಾರವಾಗಿದೆ ಎಂದು ಆರೋಪಿಸಿದರು.

ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯದ ನಿರೀಕ್ಷೆಯನ್ನು ಹೊಂದಿದ್ದರು. ಆದರೆ ಅಧಿಕಾರಕ್ಕೆ ಬಂದಬಳಿಕ ಜನವಿರೋಧಿ ನಿಲುವು ತೆಗೆದುಕೊಳ್ಳುತ್ತಿರುವ ಮುಖ್ಯಮಂತ್ರಿಗಳು ಪಂಚಾಯತ್ ಸದಸ್ಯರಿಗೆ ಕಾನೂನಿನ ಗದಾಪ್ರಹಾರ ನಡೆಸಲು ಮುಂದಾಗಿದ್ದಾರೆ ಎಂದು ಟೀಕಿಸಿದರು.

ವಿ.ಪ ಸದಸ್ಯ ಮೋನಪ್ಪ ಭಂಡಾರಿ, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ ಭಟ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಉಮಾನಾಥ ಕೋಟ್ಯಾನ್, ಪ್ರ.ಕಾರ್ಯದರ್ಶಿ ದೇವದಾಸ ಶೆಟ್ಟಿ, ಬಂಟ್ವಾಳ ತಾ.ಪಂ.ಅಧ್ಯಕ್ಷೆ ಲಲಿತಾ, ಉಪಾಧ್ಯಕ್ಷ ಆನಂದ ಶಂಭೂರು, ಜಿ.ಪಂ.ಸದಸ್ಯರಾದ ನಳಿನಿ ಶೆಟ್ಟಿ, ಸಂತೋಷ್ ಕುಮಾರ್ ಬೋಳಿಯಾರ್, ಪಕ್ಷದ ಮುಖಂಡರಾದ ತುಂಗಪ್ಪ ಬಂಗೇರ, ಜಿ.ಆನಂದ, ನೇಮಿರಾಜ ರೈ, ದಿನೇಶ್ ಅಮ್ಟೂರು, ದಿನೇಶ್ ಭಂಡಾರಿ, ರಾಮ್ ದಾಸ್ ಬಂಟ್ವಾಳ, ಸದಾನಂದ ಮಲ್ಲಿ, ತಾ.ಪಂ., ಗ್ರಾ.ಪಂ., ಪುರಸಭೆ, ಬಿಜೆಪಿ ಸದಸ್ಯರು ಹಾಗೂ ಪಕ್ಷದ ಇತರ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ತಹಶೀಲ್ದಾರರ ಮೂಲಕ ರಾಜ್ಯಾಪಾಲರಿಗೆ ಮನವಿ ಸಲ್ಲಿಸಲಾಯಿತು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English