ಮಂಗಳೂರು: ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಮಾಧ್ಯಮ ಪ್ರತಿನಿದಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಭಾಗವಹಿಸಿದರು.
ಜಿಲ್ಲೆಯ ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ಚಿಕಿತ್ಸೆ ನೀಡಲು ಸರ್ಕಾರ 9 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಲು ಉಚಿತ ತಪಾಸಣಾ ಕೇಂದ್ರಗಳನ್ನು ರಾಜ್ಯದೆಲ್ಲೆಡೆ ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.
ಡೆಂಗ್ಯೂ ಮುಂತಾದ ರೋಗಗಳ ಬಗ್ಗೆ ಮುಂದಿನ ವರ್ಷ ಜನವರಿ ತಿಂಗಳಿಂದಲೇ ಎಲ್ಲಾ ಜಿಲ್ಲೆಗಳಲ್ಲಿ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಶಾಲೆಗಳಲ್ಲಿ ಮಕ್ಕಳ ರಕ್ತಹೀನತೆ ಸಮಸ್ಯೆಯನ್ನು ತಡೆಗಟ್ಟಲು ಮಕ್ಕಳಿಗೆ ವಾರಕ್ಕೆ ಒಂದು ಸಲ ಐರನ್ ಫೊಲಿಕ್ ಆಸಿಡ್ ಮಾತ್ರೆಗಳನ್ನು ನೀಡಲಾಗುವುದು.
ಬೆಂಗಳೂರಿನಲ್ಲಿ ಜು.17ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಗುಲಾಂ ನಬಿ ಅಜಾದ್ ರಾಷ್ಟ್ರಮಟ್ಟದ ಮಕ್ಕಳ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ನಗುಮಗು ಯೋಜನೆಯಂತೆ ಬಾಣಂತಿ ತಾಯಿ ಹಾಗು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಯಿಂದ ಮನೆಗೆ ತಲುಪಿಸಲು ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದರು.
Click this button or press Ctrl+G to toggle between Kannada and English