ಮಂಗಳೂರು : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನೂತನ ಹೈಸ್ಪೀಡ್ ಹಾಲು ಪ್ಯಾಕಿಂಗ್ ಯಂತ್ರದ ಉದ್ಘಾಟನೆ ಮತ್ತು ನಂದಿನಿ ಉತ್ಪನ್ನಗಳ ವಿಶೇಷ ಮಾರಾಟ ಯೋಜನೆಯ ಬಿಡುಗಡೆ ಸಮಾರಂಭವು ಸೋಮವಾರ ನಗರದ ಕುಲಶೇಖರದಲ್ಲಿ ಜರಗಿತು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ಅವರು ಈ ಯೋಜನೆಗೆ ಚಾಲನೆ ನೀಡಿದರು.
ಕೆ.ಎಂ.ಎಫ್ ನ ಗುಣಮಟ್ಟದ ಉತ್ಪನ್ನಗ್ಳಾಗಳಿಗೆ, ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಜಿಲ್ಲೆಯಲ್ಲಿ ಉತ್ತಮ ಬೇಡಿಕೆ ಹೆಚ್ಚಿದೆ. ಇಂದಿನ ಪೈಪೋಟಿ ಯುಗದಲ್ಲಿ ಗ್ರಾಹಕರ ಅಪೇಕ್ಷೆಗೆ ಅನುಗುಣವಾಗಿ ಗುಣಮಟ್ಟದ ಉತ್ಪನ್ನಗಳನ್ನು ಪೂರೈಸುವ ಗುರುತರ ಜವಾಬ್ದಾರಿ ಕೆಎಂಎಫ್ ಮುಂದಿದೆ. ಈ ನಿಟ್ಟಿನಲ್ಲಿ ಹೈಸ್ಪೀಡ್ ಹಾಲು ಪ್ಯಾಕಿಂಗ್ ಯಂತ್ರ ಮಹತ್ತರ ಹೆಜ್ಜೆಯಾಗಲಿದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ದ.ಕ. ಜಿಲ್ಲೆಯಲ್ಲಿ ಹೈನುಗಾರಿಕೆಗೆ ಅಧಿಕ ಉತ್ತೇಜನ ದೊರೆಯಬೇಕು. ನೂತನ ಸರಕಾರ ಬಂದಾಗ ರೈತರ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದರು.
ಸೌಲಭ್ಯಗಳು ನೇರವಾಗಿ ಫಲಾನುಭವಿಗಳಿಗೆ ತಲುಪುವಲ್ಲಿ ಶ್ರಮಿಸುವ ಕ್ಷೇತ್ರವೆಂದರೆ ಅದು ಸಹಕಾರಿ ಕ್ಷೇತ್ರ ಮಾತ್ರ ಎಂದ ಅವರು, ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೃಷಿ ಭೂಮಿ ಇದ್ದವರಿಗೆ ಸಹಕಾರಿ ಬ್ಯಾಂಕ್‌ನಿಂದ ಶೇ. 3ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದು ಅವರು ತಿಳಿಸಿದರು.
ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಪೋರೇಟರ್ ಭಾಸ್ಕರ್ ಕೆ. ಮುಖ್ಯ ಅತಿಥಿಯಾಗಿದ್ದರು.
ಕೊಲಂಬೋ ಮುಕ್ತ ವಿಶ್ವ ವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದ ಹಿನ್ನೆಲೆಯಲ್ಲಿ ಎಂ.ಎನ್. ರಾಜೇಂದ್ರಕುಮಾರ್ ಅವರನ್ನು ಒಕ್ಕೂಟದ ವತಿಯಿಂದ ಸಮ್ಮಾನಿಸಲಾಯಿತು. ಒಕ್ಕೂಟದ ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ಎ. ಜಗದೀಶ್ ಕಾರಂತ್ ಮೊದಲಾದವರು ಉಪಸ್ಥಿತರಿದ್ದರು. ಸೀತಾರಾಮ ರೈ ಸವಣೂರು ಸ್ವಾಗತಿಸಿದರು.
Click this button or press Ctrl+G to toggle between Kannada and English