ಮಂಗಳೂರು : ನಗರದ ಅತ್ತಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ, ಕಬ್ಬಿಣಾಂಶಯುಕ್ತ ಮಾತ್ರೆಗಳ(ಡಬ್ಲ್ಯು.ಐ.ಎಫ್.ಎಸ್.) ವಿತರಣಾ ಕಾರ್‍ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಎನ್.ಪ್ರಕಾಶ್ ಉದ್ಘಾಟಿಸಿದರು.
ಕಬ್ಬಿಣಾಂಶಯುತ ಮಾತ್ರೆಗಳನ್ನು ಸೇವಿಸುವುದರಿಂದ ಮಕ್ಕಳಲ್ಲಿ ಕಂಡು ಬರುವ ರಕ್ತ ಹೀನತೆ, ಕಲಿಕಾ ಏಕಾಗ್ರತೆ ಕುಂಠಿತ, ದೈಹಿಕ ತೊಂದರೆಗಳು ದೂರವಾಗುತ್ತದೆ ಎಂದು ಜಿಲ್ಲಾಧಿಕಾರಿ ಶ್ರೀ ಎನ್.ಪ್ರಕಾಶ್ ಅಭಿಪ್ರಾಯ ಪಟ್ಟರು.
ಕಬ್ಬಿಣಾಂಶಯುತ ಮಾತ್ರೆಗಳ(ಡಬ್ಲ್ಯು.ಐ.ಎಫ್.ಎಸ್.) ವಿತರಣಾ ಕಾರ್‍ಯಕ್ರಮವನ್ನು ಮಕ್ಕಳಿಗೆ ಮಾತ್ರೆ ತಿನ್ನಿಸುವ ಮೂಲಕ ಜಿಲ್ಲಾಧಿಕಾರಿ ಉದ್ಘಾಟಿಸಿದರು.
ಇದೊಂದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತಿಯ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಈ ಸಂಧರ್ಭ ಮಾತನಾಡಿದರು.
ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ರುಕ್ಮಿಣಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಪೋರೇಟರ್ ಅಬ್ದುಲ್ ರಾವೂಫ್ ವಹಿಸಿದ್ದರು. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರಾದ ಮೊಸೆಸ್ ಜಯಶೇಖರ್, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ರಾವ್ ಮುಂತಾದವರು ಹಾಜರಿದ್ದರು.
Click this button or press Ctrl+G to toggle between Kannada and English