ಮಂಗಳೂರು : ಸಕಲ ಚರಾಚರ ವಸ್ತುಗಳ ಶ್ರೇಯಸ್ಸು ಹಾಗೂ ಲೋಕದ ಸುಕ್ಷೇಮವನ್ನು ಬಯಸಿ ಮಂಗಳೂರಿನ ಧಾರ್ಮಿಕ ಕೇಂದ್ರವಾದ ಶ್ರೀ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ವಿಶೇಷ ಗೋಪೂಜಾ ಮಹೋತ್ಸವವು ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ಜರುಗಿತು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಅವರ ಮುಖಂಡತ್ವದಲ್ಲಿ ಆಯೋಜನೆಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಗೋಮಾತೆಗೆ ಮಂಗಳಾರತಿ ನೆರವೇರಿಸಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಸಮಿತಿಯ ಪ್ರಮುಖರು, ಪಕ್ಷದ ಹಿರಿಯ-ಕಿರಿಯ ಧುರೀಣರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









