ಮಂಗಳೂರು : ಸ್ವಾವಲಂಬನೆಯ ಹಾದಿಯಲ್ಲಿ ಸಾಧನೆಗೈದು ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುವ ಮ್ಯಾಕೋ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕಿ ಶ್ರೀಮತಿ ಭವಿತಾ ಡಿ’ಸೋಜಾ ಅವರನ್ನು ಸಂಸ್ಥೆಯ ವತಿಯಿಂದ ಆದರದಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಸೊಸೈಟಿಯ ಅಧ್ಯಕ್ಷರೂ ಹಾಗೂ ವಿಧಾನ ಪರಿಷತ್ ಸದಸ್ಯರೂ ಆದ ಶ್ರೀ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ನಡೆದ ಆಡಳಿತ ಮಂಡಳಿಯ ವಿಶೇಷ ಸಭೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ನೆರವೇರಿತು. ಈ ವೇಳೆ ಭವಿತಾ ಡಿ’ಸೋಜಾ ಅವರ ಕಠಿಣ ಪರಿಶ್ರಮ ಮತ್ತು ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅವರು, ಇವರ ಈ ಯಶಸ್ಸು ಸಮಾಜದ ಇತರೆ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ದೊಡ್ಡಪ್ರಮಾಣದ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.
ಈ ಸಮಾರಂಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಸಿರಿಲ್ ಡಿ’ಸೋಜಾ, ನಿರ್ದೇಶಕರ ಮಂಡಳಿಯ ಸದಸ್ಯರಾದ ಜೇಮ್ಸ್ ಮಾಡ್ತಾ, ರಾಜೇಶ್, ಭಾಸ್ಕರ್ ರಾವ್, ಶೇಖರ್, ವಿದ್ಯಾ ತೋರಸ್, ಅನಿಲ್ ಹಾಗೂ ಮುಖ್ಯ ಕಾರ್ಯದರ್ಶಿ ನಿಶಿತಾ ಉಪಸ್ಥಿತರಿದ್ದು, ನೂತನ ಸಾಧಕಿಗೆ ಶುಭ ಹಾರೈಕೆಗಳೊಂದಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









