ನಗರದ ಪುರಭವನದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜಾಗೃತಿ ಕಾರ್ಯಕ್ರಮ

11:03 AM, Monday, July 29th, 2013
Share
1 Star2 Stars3 Stars4 Stars5 Stars
(4 rating, 5 votes)
Loading...

Maleria Dengueಮಂಗಳೂರು : ಹೆಲ್ತ್  ಕನ್ಸೆರ್ನ್ ಪೌಂಡೇಶನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮವು ಜುಲೈ17 ರಂದು ಪುರಭವನದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಎಂಎಲ್ ಸಿ ಗಣೇಶ್ ಕಾರ್ಣಿಕ್ ನೆರವೇರಿಸಿದರು.

ಉದ್ಘಾಟನೆಯ ಬಳಿಕ ಮಾತನಾಡಿದ ಕಾರ್ಣಿಕ್ ಅವರು ರೋಗಗಳ ಬಗ್ಗೆ ಜನರಲ್ಲಿ ನೈರ್ಮಲ್ಯ ಮತ್ತು ಶುಚಿತ್ವದ ಬಗ್ಗೆ ಅರಿವು ಮೂಡಿಸಬೇಕು. ನಗರಗಳಲ್ಲಿ ಚರಂಡಿ ಮತ್ತು ಮನೆಯ ಆವರಣದಲ್ಲಿ ಕೊಳಕು ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಮಲೇರಿಯಾ ಮತ್ತು ಡೆಂಗ್ಯೂವಿನಂತಹ ರೋಗಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಸಚಿವರಾದಂತಹ ಯು.ಟಿ.ಖಾದರ್ರವರು ಈಗಾಗಲೇ  ಶಾಲೆಗಳಿಗೆ ಬೇಟಿ ನೀಡಿ ರೋಗಗಳ ಬಗ್ಗೆ ಮಾಹಿತಿ ಮತ್ತು ವೈದ್ಯಕೀಯ ತಪಾಸನೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ತಿಳಿಸಿದ್ದಾರೆ. ರೋಗದ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆ.ಅರ್ ಲೋಬೊ ಹೇಳಿದರು.

Maleria Dengueಪ್ರತಿ ತಾಲೂಕಿಗೆ ಮಲೇರಿಯಾ ಮತ್ತು ಡೆಂಗ್ಯೂ ಮಾಹಿತಿ ಮತ್ತು ವೈದ್ಯಕೀಯ ತಪಾಸನೆ ನಡೆಸಲು ಎರಡು ವೈದ್ಯರು ಮತ್ತು ಇಬ್ಬರು ನರ್ಸ್ ಗಳನ್ನು ಹೊಂದಿರತಕ್ಕ ವಾಹನವನ್ನು ಒದಗಿಸಲಾಗುವುದು ಎಂದು ಲೋಬೊ ಹೇಳಿದರು.

ಎಂ.ಸಿ.ಸಿ. ಕಮಿಷನರ್ ಅಜಿತ್ ಕುಮಾರ್ ಹೆಗ್ಡೆ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಿವಕುಮಾರ್,  ಶಾಸಕ ಮೊಯಿದ್ದಿನ್ ಬಾವ, ಕಾರ್ಪೊರೇಶನ್ ಬ್ಯಾಂಕಿನ ಡಿ.ಎಮ್ ಮಂಜುದಾರ್, ಕರ್ಣಾಟಕ ಬ್ಯಾಂಕಿನ ಮಹಾಬಲೇಶ್ವರ ಭಟ್, ಡಾ.ಎಡ್ಮಂಡ್ ಪೆರ್ನಾಡೀಸ್ , ಉದಯ ಕಿರಣ್, ಡಾ. ರಾಮಚಂದ್ರ ಕಾಮತ್ ಉಪಸ್ಥಿತರಿದ್ದರು.

Maleria Dengue

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English