- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಲೋಕಸಭೆ ಉಪ ಚುನಾವಣೆ ಶಾಸಕಿ ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ.

Anitha-Kumaraswami [1]ಬೆಂಗಳೂರು: ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ  ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಉಪ ಚುನಾವಣೆಗೆ ಶನಿವಾರ ನಾಮಪತ್ರ ಸಲ್ಲಿಸಿದರು.

ತನ್ನ ಪತಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಅವರು ತಮ್ಮಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾ ಅವರು ಉಪಸ್ಥಿತರಿದ್ದರು.

ಇಲ್ಲಿ  ಕಾಂಗ್ರೆಸ್‌ನಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರು ಸ್ಪರ್ಧಿಸುತ್ತಿದ್ದು, ಇಬ್ಬರ ನಡುವೆ ನೇರ ಹಣಾಹಣಿ ಏರ್ಪಡಲಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚೆನ್ನಪಟ್ಟಣದಿಂದ ಸ್ಪರ್ಧಿಸಿ ಸೋತಿದ್ದ ಅನಿತಾ ಕುಮಾರಸ್ವಾಮಿ ಅವರು ಈಗ ಲೋಕಸಭೆ ಕಣಕ್ಕಿಳಿದಿದ್ದಾರೆ.

ವಿಧಾನಸಭೆಗೆ ಆಯ್ಕೆಯಾಗಿ ಈಗ ಪ್ರತಿಪಕ್ಷದ ನಾಯಕರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರ ರಾಜಿನಾಮೆಯಿಂದ ತೆರವಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಮರು ಚುನಾವಣೆ ನಡೆಯುತ್ತಿದ್ದು, ಪತಿಯ ಸ್ಥಾನವನ್ನು ಪತ್ನಿ ಉಳಿಸಿಕೊಳ್ಳುತ್ತಾರೆಯೇ ಎಂಬುದು ಕಾದು ನೋಡಬೇಕಿದೆ.

ಚನ್ನಪಟ್ಟಣ ಸೋಲಿನ ಬೇಸರದಿಂದ ಇನ್ನೂ ಹೊರ ಬರದ ಅನಿತಾ ಕುಮಾರಸ್ವಾಮಿ ಅವರಿಗೆ ಪ್ರಸಕ್ತ ಮರು ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ಸುತಾರಾಂ ಇಷ್ಟವಿರಲಿಲ್ಲ. ಆದರೆ, ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಒತ್ತಡಕ್ಕೆ ಮಣಿದು ಸಮ್ಮತಿಸಿದ್ದಾರೆನ್ನಲಾಗಿದೆ.  ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಸಹಿತ ನಾಯಕರು ಸ್ಪರ್ಧೆಗಿಳಿಯಲು ನಿರಾಕರಿಸಿದ್ದರು. 2 ಬಾರಿ ನಡೆದ ಪಕ್ಷದ ಸಭೆಯಲ್ಲೂ ಅನಿತಾ ಅವರನ್ನೇ ಕಣಕ್ಕಿಳಿಸಬೇಕೆನ್ನುವ ಒತ್ತಾಯ ವ್ಯಕ್ತವಾಗಿತ್ತು. ಶುಕ್ರವಾರ ಬೆಳಗ್ಗೆ ದೇವೇಗೌಡ ಅವರು ಅನಿತಾ ಜತೆ ಚರ್ಚಿಸಿ, ಸ್ಪರ್ಧೆಗೆ ಒಪ್ಪಿಸಿದ್ದಾರೆ.